ಹಾವೇರಿ:ಕೃಷಿ ಸಚಿವ ಬಿ.ಸಿ.ಪಾಟೀಲ್ ಎರಡನೇ ಹಂತದ ಕೋವಿಡ್ ಲಸಿಕೆಯನ್ನು ಆಸ್ಪತ್ರೆಯಲ್ಲಿ ಹಾಕಿಸಿಕೊಂಡಿದ್ದಾರೆ.
ಸಚಿವ ಬಿ ಸಿ ಪಾಟೀಲ್ಗೆ ಕೊರೊನಾ ಎರಡನೇ ಹಂತದ ಲಸಿಕೆ ಹಾವೇರಿ ಜಿಲ್ಲೆ ಹಿರೇಕೆರೂರು ಸರ್ಕಾರಿ ಆಸ್ಪತ್ರೆಗೆ ತೆರಳಿದ ಬಿ.ಸಿ.ಪಾಟೀಲ್ ಅಲ್ಲಿಯೇ ಲಸಿಕೆ ಹಾಕಿಸಿಕೊಂಡರು. ಅಲ್ಲದೆ 30 ನಿಮಿಷಗಳ ಕಾಲ ತಪಾಸಣೆಯಲ್ಲಿದ್ದರು. ಈ ಕುರಿತಂತೆ ಫೇಸ್ಬುಕ್ನಲ್ಲಿ ಸಚಿವರು ಪೋಸ್ಟ್ ಮಾಡಿದ್ದಾರೆ.
ಕೊರೊನಾ ಲಸಿಕೆ ಬಗ್ಗೆ ತಪ್ಪು ಅಭಿಪ್ರಾಯಗಳಿಗೆ ಕಿವಿಗೊಡಬೇಡಿ. ಮುಂಜಾಗೃತಾ ಕ್ರಮವಾಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ತಿಳಿಸಿದರು.
ಪ್ರಥಮ ಹಂತದ ಲಸಿಕೆಯನ್ನು ಬಿ.ಸಿ.ಪಾಟೀಲ್ ಮನೆಯಲ್ಲಿ ಪಡೆದಿದ್ದು ಸಾಕಷ್ಟು ವಿವಾದ ಸೃಷ್ಟಿಸಿತ್ತು. ಅಲ್ಲದೆ ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿಯನ್ನು ಅಮಾನತು ಮಾಡಲು ಕಾರಣವಾಗಿತ್ತು.