ಕರ್ನಾಟಕ

karnataka

ETV Bharat / state

ಸಿರಿಗೆರೆ ಶ್ರೀಗಳಿಂದ ಬ್ಯಾಡಗಿ ಆಸ್ಪತ್ರೆಗೆ 36 ಆಕ್ಸಿಜನ್ ಸಿಲಿಂಡರ್ ಪೂರೈಕೆ

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ 36 ಜಂಬೋ ಆಕ್ಸಿಜನ್ ಸಿಲಿಂಡರ್ ನೀಡಿದ್ದಾರೆ.

Haveri
ಸಿರಿಗೆರೆಯ ಶ್ರೀಗಳಿಂದ ಬ್ಯಾಡಗಿ ಆಸ್ಪತ್ರೆಗೆ 36 ಆಕ್ಸಿಜನ್ ಸಿಲಿಂಡರ್

By

Published : May 16, 2021, 8:58 AM IST

ಹಾವೇರಿ:ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳು ಆಕ್ಸಿಜನ್ ಕೊರತೆ ಎದುರಿಸುತ್ತಿವೆ.

ಸಿರಿಗೆರೆ ಶ್ರೀಗಳಿಂದ ಬ್ಯಾಡಗಿ ಆಸ್ಪತ್ರೆಗೆ 36 ಆಕ್ಸಿಜನ್ ಸಿಲಿಂಡರ್ ಪೂರೈಕೆ

ಹೀಗಿರುವಾಗ ಹಾವೇರಿ ಜಿಲ್ಲೆ ಬ್ಯಾಡಗಿಯ ತಾಲೂಕು ಆಸ್ಪತ್ರೆಗೆ ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು 36 ಜಂಬೋ ಆಕ್ಸಿಜನ್ ಸಿಲಿಂಡರ್ ನೀಡಿದ್ದಾರೆ. ಹರಿಹರದಿಂದ 8 ಮತ್ತು ದಾವಣಗೆರೆಯಿಂದ 28 ಒಟ್ಟು 36 ಸಿಲಿಂಡರ್‌ಗಳನ್ನ ಶ್ರೀಗಳು ಕಳುಹಿಸಿಕೊಟ್ಟಿದ್ದು, ಇನ್ನೂ ಅಗತ್ಯ ಬಿದ್ದರೆ ಕಳಿಸುವುದಾಗಿ ತಿಳಿಸಿದ್ದಾರೆ.

ಈ ವಿಚಾರ ಬ್ಯಾಡಗಿ ತಾಲೂಕಿನ ಜನರಿಗೆ ಸಂತಸ ತಂದಿದ್ದು, ಶ್ರೀಗಳ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details