ಕರ್ನಾಟಕ

karnataka

ETV Bharat / state

ಹಾವೇರಿ; ಜಿಲ್ಲಾಸ್ಪತ್ರೆ ವೈದ್ಯರು ಸೇರಿ‌ ಐವರಲ್ಲಿ ಸೋಂಕು ದೃಢ - ಹಾವೇರಿ ಲೆಟೆಸ್ಟ್ ನ್ಯೂಸ್

ಜಿಲ್ಲಾಸ್ಪತ್ರೆಯ ವೈದ್ಯರು ಸೇರಿದಂತೆ ಐವರು ಸಿಬ್ಬಂದಿಗೆ ಮಹಾಮಾರಿ ಸೋಂಕು ತಗುಲಿರುವುದು ದೃಢಪಟ್ಟಿದೆ.

Corona for haveri district hospital staff
Corona for haveri district hospital staff

By

Published : Jul 22, 2020, 11:27 PM IST

ಹಾವೇರಿ: ಇಲ್ಲಿನ ಜಿಲ್ಲಾಸ್ಪತ್ರೆಯ ವೈದ್ಯರು ಸೇರಿದಂತೆ ಐವರು ಸಿಬ್ಬಂದಿಗೆ ಮಹಾಮಾರಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೋವಿಡ್ ಆಸ್ಪತ್ರೆಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದ ವೈದ್ಯಾಧಿಕಾರಿಗೆ ಸೋಂಕು ದೃಢಪಟ್ಟಿದೆ. ಜೊತೆಗೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಜಿಲ್ಲಾಸ್ಪತ್ರೆಯ ವೈದ್ಯರಿಗೆ, ಇಬ್ಬರು ಡಿ ದರ್ಜೆ ನೌಕರರಲ್ಲಿ ಮತ್ತು ಲ್ಯಾಬ್ ಟೆಕ್ನಿಶಿಯನ್‌ಗೆ ಸಹ ಸೋಂಕು ತಗುಲಿದೆ.

ಉಳಿದಂತೆ, ಹಾವೇರಿ ತಾಲೂಕಿನ ಮೂವರು ಮತ್ತು ರಾಣೆಬೆನ್ನೂರು ತಾಲೂಕಿನ ಓರ್ವ ಗರ್ಭಿಣಿಗೆ ಸೋಂಕು ತಗುಲಿದೆ. ಶಿಗ್ಗಾವಿ ತಾಲೂಕಿನಲ್ಲಿ ಟೈಲ್ಸ್ ಹಾಕುವವನಿಗೆ ಮತ್ತು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಕಾಣಿಸಿಕೊಂಡಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.

ABOUT THE AUTHOR

...view details