ಹಾವೇರಿ:ಜಿಲ್ಲೆಯ ಐವರು ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಹಾವೇರಿಯಲ್ಲಿ 5 ಕೊರೊನಾ ಸೋಂಕಿತರು ಗುಣಮುಖ..ಆಸ್ಪತ್ರೆಯಿಂದ ಬಿಡುಗಡೆ - ಹಾವೇರಿ ಕೊರೊನಾ ಕೇಸ್
ಹಾವೇರಿ ಜಿಲ್ಲೆಯಲ್ಲಿ 5 ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿರುವಂತೆ ವೈದ್ಯರು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರ ಪರೀಕ್ಷಾ ವರದಿ ನೆಗಟಿವ್ ಬಂದ ಹಿನ್ನೆಲೆಯಲ್ಲಿ, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜಿಲ್ಲೆಯಲ್ಲಿ ಇದುವರೆಗೂ 21 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆ ಪೈಕಿ 11 ಜನರು ಆಸ್ಪತ್ರೆಯಿಂದ ಈಗಾಗಲೇ ಬಿಡುಗಡೆಯಾಗಿದ್ದು,ಇವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿರುವಂತೆ ವೈದ್ಯರು ತಿಳಿಸಿದ್ದಾರೆ.
ಇನ್ನೊಂದು ಸಂತಸದ ವಿಷಯವೆಂದರೆ, ಭಾನುವಾರ ಮತ್ತು ಸೋಮವಾರ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. ಶನಿವಾರ ದೃಢಪಟ್ಟಿರುವ ಮೂವರು ಕೊರೊನಾ ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕದಲ್ಲಿರುವವರನ್ನ ಹಾವೇರಿಯ ಹೊರವಲಯದ ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿದೆ. ಗಣಜೂರು ಮತ್ತು ಸಂಗೂರು ಗ್ರಾಮದ ವ್ಯಕ್ತಿಯ ನೇರವಾಗಿ ಕ್ವಾರಂಟೈನ್ ಕೇಂದ್ರಕ್ಕೆ ತಂದಿದ್ದರಿಂದ ಯಾವುದೇ ಸಂಪರ್ಕಿತರು ಸಿಕ್ಕಿಲ್ಲ. ಜಿಲ್ಲೆಯಲ್ಲಿ ವಿವಿಧೆಡೆ ಇರುವ ಕ್ವಾರಂಟೈನ್ ಕೇಂದ್ರಗಳಲ್ಲಿ ಸುಮಾರು 506 ಜನರನ್ನ ಕ್ವಾರಂಟೈನ್ ಮಾಡಲಾಗಿದೆ.