ಹಾವೇರಿ: ಜಿಲ್ಲೆಯಲ್ಲಿಂದು 52 ಜನರಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 712ಕ್ಕೆ ಏರಿಕೆಯಾಗಿದೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಹಾವೇರಿ; 52 ಮಂದಿಗೆ ಸೋಂಕು, ಇಬ್ಬರು ಬಲಿ - Haveri corona news
ಜಿಲ್ಲೆಯಲ್ಲಿಂದು 52 ಜನರಿಗೆ ಸೋಂಕು ದೃಢಪಟ್ಟಿದೆ ಹಾಗೂ 64 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ. ಇನ್ನೂ ಇಬ್ಬರು ಸಾವನ್ನಪ್ಪಿದ್ದಾರೆ.
ಇಂದು ರಾಣೆಬೆನ್ನೂರು ತಾಲೂಕಿನಲ್ಲಿ 16, ಹಿರೇಕೆರೂರು ತಾಲೂಕಿನಲ್ಲಿ 12, ಹಾವೇರಿ ತಾಲೂಕಿನಲ್ಲಿ 10, ಶಿಗ್ಗಾವಿ ತಾಲೂಕಿನಲ್ಲಿ 6, ಸವಣೂರು ತಾಲೂಕಿನಲ್ಲಿ 5, ಹಾನಗಲ್ ತಾಲೂಕಿನಲ್ಲಿ 2 ಮತ್ತು ಬ್ಯಾಡಗಿ ತಾಲೂಕಿನಲ್ಲಿ 1 ಸೋಂಕು ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 712ಕ್ಕೆ ತಲುಪಿದೆ. ಇನ್ನೂ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 64 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈವರೆಗೆ 452 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 237 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ನಾಲ್ಕು ಜನರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.