ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ Black​ Fungus​​ ಅಬ್ಬರ: ಇದುವರೆಗೆ 53 ಜನರಲ್ಲಿ ಕಂಡು ಬಂದ ವೈರಸ್​

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಪ್ರತ್ಯೇಕ ವಾರ್ಡ್ ನಿರ್ಮಿಸಲಾಗಿದೆ. ಇನ್ನು ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, 53 ಪ್ರಕರಣಗಳು ವರದಿಯಾಗಿದೆ.

haveri
ಹಾವೇರಿ ಜಿಲ್ಲಾಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ.ಪಿ.ಆರ್.ಹಾವನೂರು

By

Published : Jun 29, 2021, 10:32 PM IST

ಹಾವೇರಿ:ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹಾವೇರಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ 53 ಬ್ಲ್ಯಾಕ್ ಫಂಗಸ್ ಪ್ರಕರಣಗಳು ವರದಿಯಾಗಿವೆ. 53 ಪ್ರಕರಣಗಳಲ್ಲಿ ಎರಡು ರೋಗಿಗಳು ಸಾವನ್ನಪ್ಪಿದ್ದಾರೆ.

ಹಾವೇರಿ ಜಿಲ್ಲಾಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ.ಪಿ.ಆರ್.ಹಾವನೂರು

ಸರ್ಕಾರದ ನಿರ್ದೇಶನದಲ್ಲಿ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಹ ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಪ್ರತ್ಯೇಕ ವಾರ್ಡ್ ನಿರ್ಮಿಸಲಾಗಿದೆ. 53 ಪ್ರಕರಣಗಳಲ್ಲಿ 9 ರೋಗಿಗಳು ಗುಣಮುಖರಾಗಿದ್ದು ಮನೆ ಸೇರಿದ್ದಾರೆ. 21 ರೋಗಿಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 21 ಪ್ರಕರಣಗಳು ಸರ್ಜರಿಗಾಗಿ ಹುಬ್ಬಳ್ಳಿ ಮತ್ತು ದಾವಣಗೆರೆ ಆಸ್ಪತ್ರೆಗಳಿಗೆ ತೆರಳಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ಹಾವೇರಿ ಜಿಲ್ಲಾಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ.ಪಿ.ಆರ್.ಹಾವನೂರು, ಎರಡು ಮೆಡಿಕಲ್ ಕಾಲೇಜುಗಳಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿಗಳು ನಂತರ ಆರೈಕೆಗಾಗಿ ಜಿಲ್ಲಾಸ್ಪತ್ರೆಗೆ ಆಗಮಿಸುತ್ತಾರೆ. ಹೀಗೆ ಆರೈಕೆಗೆ ಬಂದ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ: ಒಂದಲ್ಲ, ಹತ್ತು ಮೊಟ್ಟೆ ನುಂಗಿದ ಹಾವು... ಒದ್ದಾಡಿ, ಒದ್ದಾಡಿ ಒಂದೊಂದಾಗಿ ವಾಂತಿ ಮಾಡ್ತು!

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನುರಿತ ಇಎನ್‌ಟಿ ತಜ್ಞರಿಲ್ಲದ ಕಾರಣ ಬೇರೆ ಆಸ್ಪತ್ರೆಗಳನ್ನ ಶಸ್ತ್ರಚಿಕಿತ್ಸೆಗಾಗಿ ಅವಲಂಬಿಸುವ ಸ್ಥಿತಿ ಇದೆ. ಶಸ್ತ್ರಚಿಕಿತ್ಸೆ ಅವಶ್ಯವಿರುವ ರೋಗಿಗಳನ್ನ ಹುಬ್ಬಳ್ಳಿ ಮತ್ತು ದಾವಣಗೆರೆ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಜುಲೈ 1 ರಿಂದ ಜಿಲ್ಲಾಸ್ಪತ್ರೆಯಲ್ಲಿರುವ ಇಎನ್‌ಟಿ ತಜ್ಞ ವೈದ್ಯರು ಸರ್ಜರಿ ಮತ್ತು ಶಸ್ತ್ರಚಿಕಿತ್ಸೆ ತರಬೇತಿಗೆ ತೆರಳುತ್ತಿದ್ದಾರೆ. ತರಬೇತಿ ಪಡೆದು ಬಂದ ಮೇಲೆ ಜಿಲ್ಲಾಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡುವುದಾಗಿ ಹಾವನೂರು ತಿಳಿಸಿದ್ದಾರೆ.

ಇನ್ನು ಜಿಲ್ಲಾಸ್ಪತ್ರೆಗೆ ಎಂಡೋಸ್ಕೋಪಿ ಸೌಲಭ್ಯ ಸಹ ಸಿಗಲಿದ್ದು ರೋಗಿಗಳ ಚಿಕಿತ್ಸೆಗೆ ಅನುಕೂಲವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details