ಹಾವೇರಿ:ಜಿಲ್ಲೆಯಲ್ಲಿಂದು 56 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 991 ಕ್ಕೇರಿದಂತಾಗಿದೆ.
ಹಾವೇರಿಯಲ್ಲಿ 56 ಜನರಿಗೆ ಕೊರೊನಾ ಪಾಸಿಟಿವ್... 991ಕ್ಕೆ ಏರಿದ ಸೋಂಕಿತರ ಸಂಖ್ಯೆ - 56 corona cases found in Haveri
ಹಾವೇರಿ ಜಿಲ್ಲೆಯಲ್ಲಿ ಇಂದು 56 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 407 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
![ಹಾವೇರಿಯಲ್ಲಿ 56 ಜನರಿಗೆ ಕೊರೊನಾ ಪಾಸಿಟಿವ್... 991ಕ್ಕೆ ಏರಿದ ಸೋಂಕಿತರ ಸಂಖ್ಯೆ Haveri](https://etvbharatimages.akamaized.net/etvbharat/prod-images/768-512-05:06:44:1596195404-kn-hvr-04-56-positive-7202143-31072020170037-3107f-1596195037-180.jpg)
Haveri
ಹಾವೇರಿ ತಾಲೂಕಿನಲ್ಲಿ- 23, ಹಿರೇಕೆರೂರು ತಾಲೂಕಿನಲ್ಲಿ-14, ಸವಣೂರು ಮತ್ತು ರಾಣೆಬೆನ್ನೂರು ತಾಲೂಕಿನಲ್ಲಿ ತಲಾ 7 ಹಾಗೂ ಶಿಗ್ಗಾವಿ ತಾಲೂಕಿನಲ್ಲಿ 5 ಜನರಿಗೆ ಕೊರೊನಾ ದೃಢಪಟ್ಟಿದೆ.
ಜಿಲ್ಲೆಯ ವಿವಿಧೆಡೆ ಇರುವ ಕೋವಿಡ್ ಆಸ್ಪತ್ರೆಗಳಲ್ಲಿ 35 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದರೆ, 407 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಏಳು ಜನರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.