ಹಾವೇರಿ: ಜಿಲ್ಲೆಯಲ್ಲಿ ಇಂದು 58 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಕೊರೊನಾ ಪೀಡಿತರ ಸಂಖ್ಯೆ 935ಕ್ಕೆ ಏರಿಕೆಯಾಗಿದೆ.
ಹಾವೇರಿಯಲ್ಲಿಂದು 58 ಜನರಿಗೆ ಸೋಂಕು: ಮೂವರು ಬಲಿ - Haveri corona news
ಹಾವೇರಿಯಲ್ಲಿ ಇಂದು 58 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. 19 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
![ಹಾವೇರಿಯಲ್ಲಿಂದು 58 ಜನರಿಗೆ ಸೋಂಕು: ಮೂವರು ಬಲಿ ಹಾವೇರಿ ಜಿಲ್ಲಾಸ್ಪತ್ರೆ](https://etvbharatimages.akamaized.net/etvbharat/prod-images/768-512-8235073-435-8235073-1596117992067.jpg)
ರಾಣೆಬೆನ್ನೂರು ತಾಲೂಕಿನಲ್ಲಿ 24, ಹಾವೇರಿ ತಾಲೂಕಿನಲ್ಲಿ 15 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇನ್ನು ಸವಣೂರು ತಾಲೂಕಿನಲ್ಲಿ 7, ಹಾನಗಲ್ ತಾಲೂಕಿನಲ್ಲಿ 6, ಶಿಗ್ಗಾವಿ ತಾಲೂಕಿನಲ್ಲಿ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ. ಹಿರೇಕೆರೂರಲ್ಲಿ ಇಬ್ಬರಿಗೆ ಕೊರೊನಾ ತಗುಲಿದೆ.19 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
935 ಪ್ರಕರಣಗಳಲ್ಲಿ ಇದುವರೆಗೂ 522 ಜನ ಗುಣಮುಖರಾಗಿ ಮನೆಗೆ ತೆರಳಿದ್ದು, 386 ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ 8 ಜನರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿಗೆ ಮೂವರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.