ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ ಸೋಮವಾರ 6 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ - District Collector Yogeshwara Mishra

ಹಾವೇರಿ ಜಿಲ್ಲೆಯಲ್ಲಿ ಸೋಮವಾರ 6 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಹಾವೇರಿ ಜಿಲ್ಲಾಡಳಿತ ಈ ಕುರಿತಂತೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

Haveri
ಹಾವೇರಿ

By

Published : Jul 13, 2020, 10:24 PM IST

ಹಾವೇರಿ:ಜಿಲ್ಲೆಯಲ್ಲಿ ಸೋಮವಾರ 6 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಹಾವೇರಿ ಜಿಲ್ಲಾಡಳಿತ ಈ ಕುರಿತಂತೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ ಎಂದು ಹಾವೇರಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಮಿಶ್ರಾ ತಿಳಿಸಿದ್ದಾರೆ.

ತಾಲೂಕಿನಲ್ಲಿ ಐದು ಜನರಿಗೆ ಕೊರೊನಾ ದೃಢಪಟ್ಟರೆ, ಸವಣೂರು ತಾಲೂಕಿನಲ್ಲಿ ಓರ್ವರಿಗೆ ಕೊರೊನಾ ದೃಢಪಟ್ಟಿದೆ. ಸೋಮವಾರ ಸಹ ಓರ್ವ ವ್ಯಕ್ತಿ ಕೊರೊನಾಕ್ಕೆ ಬಲಿಯಾಗಿದ್ದಾರೆ. 9ರಂದು ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ 45 ವರ್ಷದ ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿತ್ತು. 10 ರಂದು ಮೃತಪಟ್ಟಿದ್ದ ಅವರ ಗಂಟಲು ದ್ರವದ ವರದಿ ರವಿವಾರ ಬಂದಿದ್ದು, ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಅಪರ ಜಿಲ್ಲಾಧಿಕಾರಿ ಯೋಗೇಶ್ವರ

ಜಿಲ್ಲೆಯಲ್ಲಿ ಇದುವರೆಗೂ 7 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಸೋಂಕು 308 ಜನರಿಗೆ ತಗುಲಿದೆ. ಅದರಲ್ಲಿ 131 ಜನರಲ್ಲಿ ಕೊರೊನಾ ಸಕ್ರಿಯವಾಗಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 170 ಜನ ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details