ಹಾವೇರಿ:ಸೆಪ್ಟೆಂಬರ್ 6 ರಿಂದ 6 ,7,8 ನೇ ತರಗತಿಗಳನ್ನು ಆರಂಭಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ನಗರದ ಎರಡನೇ ನಂಬರ್ ಮತ್ತು ಉರ್ದು ಮಾಧ್ಯಮ ಶಾಲೆಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೊತೆ ಶಾಲಾರಂಭದ ಕುರಿತಂತೆ ಮಾಹಿತಿ ಪಡೆದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸಿ ಸದ್ಯ 9 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 6 ರಿಂದ 8 ನೇ ತರಗತಿ ಆರಂಭಿಸಿ ಒಂದು ವಾರ ಕಾಲ ನೋಡುತ್ತೇವೆ. ಪ್ರಸ್ತುತ ಕೊರೊನಾ ಸ್ಥಿತಿಗತಿ ನೋಡಿಕೊಂಡು ಮುಂದಿನ ದಿನಗಳಲ್ಲಿ ಒಂದನೇ ತರಗತಿಯಿಂದ ಶಾಲೆ ಆರಂಭಿಸುತ್ತೇವೆ. ಮಕ್ಕಳ ಶಿಕ್ಷಣದ ಜೊತೆಗೆ ನಾವು ಅವರ ಆರೋಗ್ಯಕ್ಕೆ ಸಹ ನೀಡುತ್ತೇವೆ ಎಂದರು.