ಹಾವೇರಿ:ಜಿಲ್ಲೆಯಲ್ಲಿಂದು 70 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಹಾವೇರಿ ಜಿಲ್ಲೆಯಲ್ಲಿಂದು ಕೊರೊನಾಗೆ ವೃದ್ಧೆ ಬಲಿ: ಮೃತರ ಸಂಖ್ಯೆ 5ಕ್ಕೆ ಏರಿಕೆ - haveri corona death
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ 70 ವರ್ಷದ ಕೊರೊನಾ ಸೋಂಕಿತ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿಂದು ಕೊರೊನಾಗೆ ವೃದ್ಧೆ ಬಲಿ..ಮೃತರ ಸಂಖ್ಯೆ ಐದಕ್ಕೆ ಏರಿಕೆ
ಜಿಲ್ಲೆಯ ಶಿಗ್ಗಾಂವಿ ಪಟ್ಟಣದ 70 ವರ್ಷದ ವೃದ್ಧೆಗೆ ಕೆಲ ದಿನಗಳ ಹಿಂದೆ ಸೋಂಕು ದೃಢಪಟ್ಟಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸರ್ಕಾರದ ನಿಯಮಾವಳಿಯಂತೆ ವೃದ್ಧೆಯ ಅಂತ್ಯಕ್ರಿಯೆ ನೆರವೇರಿಸುವಂತೆ ಪುರಸಭೆ ಅಧಿಕಾರಿಗಳಿಗೆ ತಹಶೀಲ್ದಾರ್ ಪ್ರಕಾಶ್ ಕುದರಿ ಸೂಚಿಸಿದ್ದಾರೆ.