ಹಾವೇರಿ: ಜಿಲ್ಲೆಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ನಗರದ ಅಜ್ಜಯ್ಯಸ್ವಾಮಿ ದೇವಸ್ಥಾನದ ಮುಂದೆ ಸಮ್ಮೇಳನದ ವೇದಿಕೆಯ ಪೂಜಾ ಕಾರ್ಯಕ್ರಮ ಇಂದು ನಡೆಯಿತು. ಹಾವೇರಿ ಶಾಸಕ ನೆಹರು ಓಲೇಕಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಂಡಿದ್ದರು.
ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀ, ಬಣ್ಣದಮಠದ ಅಭಿನವ ಚೆನ್ನಮಲ್ಲಿಕಾರ್ಜುನ ಶ್ರೀ, ನೆಗಳೂರು ದಳವಾಯಿ ಮಠದ ಶ್ರೀ, ಆಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಮತ್ತು ಅಗಡಿ ಪ್ರಭುಮಠದ ಶ್ರೀ ಸಾನಿಧ್ಯ ವಹಿಸಿದ್ದರು. ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀಗಳು, ನಂತರ ಗುದ್ದಲಿ ಪೂಜೆ ಮಾಡುವ ಮೂಲಕ ವೇದಿಕೆಯ ನಿರ್ಮಾಣಕ್ಕೆ ಚಾಲನೆ ಕೊಟ್ಟರು.