ಹಾವೇರಿ: ಫೆಬ್ರವರಿ 26,27 ಮತ್ತು 28 ರಂದು ಮೂರು ದಿನಗಳ ಕಾಲ ನಗರದಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕಸಾಪ ಅಧ್ಯಕ್ಷ ಮನು ಬಳಿಗಾರ್ ಹೇಳಿದ್ದಾರೆ.
ಫೆಬ್ರವರಿ 26ರಿಂದ ಮೂರು ದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಮನು ಬಳಿಗಾರ್ - 86th All India Kannada Literary Conference
ಕೊರೊನಾ ಇದೇ ರೀತಿ ಕಡಿಮೆಯಾದ್ರೆ ಮೂರು ವೇದಿಕೆಗಳಲ್ಲಿ ಸಮ್ಮೇಳನ ನಡೆಸಲಾಗುವುದು. ಇನ್ನು, 14 ದಿನದೊಳಗೆ ಕಾರ್ಯಕಾರಿ ಸಮಿತಿ ಸಭೆ ಕರೆದು ಸಮ್ಮೇಳನದ ಅಧ್ಯಕ್ಷರ ಆಯ್ಕೆ ಮಾಡಲಾಗುತ್ತೆ..

ಈ ಹಿನ್ನೆಲೆ ಇಂದು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ 2ನೇ ಸಿದ್ಧತಾ ಸಭೆ ನಡೆಯಿತು. ಸಭೆ ನಂತರ ಮಾತನಾಡಿದ ಮನು ಬಳಿಗಾರ್, ಸಭೆಯಲ್ಲಿ ಕೃಷಿ ಸಚಿವ ಬಿ ಸಿ ಪಾಟೀಲ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಸಾಹಿತಿಗಳು, ವಿವಿಧ ವಲಯದ ಗಣ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೇಳನಕ್ಕೆ ವೇದಿಕೆ, ಗೋಷ್ಠಿಗಳ ಕುರಿತಂತೆ ಚರ್ಚಿಸಲಾಯಿತು.
ಕೊರೊನಾ ಇದೇ ರೀತಿ ಕಡಿಮೆಯಾದ್ರೆ ಮೂರು ವೇದಿಕೆಗಳಲ್ಲಿ ಸಮ್ಮೇಳನ ನಡೆಸಲಾಗುವುದು. ಇನ್ನು, 14 ದಿನದೊಳಗೆ ಕಾರ್ಯಕಾರಿ ಸಮಿತಿ ಸಭೆ ಕರೆದು ಸಮ್ಮೇಳನದ ಅಧ್ಯಕ್ಷರ ಆಯ್ಕೆ ಮಾಡುವುದಾಗಿ ಮನು ಬಳಿಗಾರ್ ಹೇಳಿದ್ದಾರೆ.