ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಾತ್ಕಾಲಿಕ ದಿನಾಂಕ ನಿಗದಿ - ಮೇ 20 ರಿಂದ ಹಾವೇರಿಯಲ್ಲಿ ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್​​ ಹೆಬ್ಬಾರ್​ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ಅಂತಿಮ ದಿನಾಂಕ ಪ್ರಕಟಿಸಲಾಗುವುದು ಎಂದು ಮಹೇಶ್​ ಜೋಶಿ ತಿಳಿಸಿದರು.

ಮಹೇಶ್​ ಜೋಶಿ
ಮಹೇಶ್​ ಜೋಶಿ

By

Published : Mar 28, 2022, 8:40 PM IST

Updated : Mar 28, 2022, 8:50 PM IST

ಹಾವೇರಿ: ಮೇ 20, 21, 22ರಂದು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್​ ಜೋಶಿ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸಮ್ಮೇಳನದ ಪ್ರಥಮ ಪೂರ್ವಸಿದ್ಧತಾ ಸಭೆಗೆ ಅವರು ಈ ಮಾಹಿತಿ ನೀಡಿದರು.


ಸದ್ಯಕ್ಕಿದು ತಾತ್ಕಾಲಿಕ ದಿನಾಂಕವಾಗಿದೆ. ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್​​ ಹೆಬ್ಬಾರ್​ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ಅಂತಿಮ ದಿನಾಂಕ ಪ್ರಕಟಿಸಲಾಗುವುದು. ಮೇ 20,21 ಮತ್ತು 22 ರಂದು ಹವಾಮಾನ, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸರ್ಕಾರಿ ನೌಕರರನ್ನು ದೃಷ್ಟಿಕೋನದಲ್ಲಿ ಇಟ್ಟುಕೊಂಡು ದಿನ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿ, ಮೂಲಭೂತ ಸೌಲಭ್ಯಗಳ ಕೊರತೆ ಇರುವ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸಮ್ಮೇಳನ ನಡೆಸುತ್ತಿರುವುದು ಸವಾಲಿನ ಕೆಲಸ. ಆದರೂ ಸಹ ಇದನ್ನು ಧೈರ್ಯದಿಂದ ಎದುರಿಸುತ್ತಿದ್ದೇವೆ. ಸಮ್ಮೇಳನಕ್ಕೆ ಆಗಮಿಸುವವರಿಗೆ ವಸತಿ, ಸಾರಿಗೆ ಮತ್ತು ಭೋಜನ ಒದಗಿಸುವ ಕುರಿತಂತೆ ಚರ್ಚಿಸಲಾಗಿದೆ. ಸಮ್ಮೇಳನ ಜನ ಜಾತ್ರೆಯಾಗಬಾರದು, ಅರ್ಥಪೂರ್ಣ ಮತ್ತು ಬಹಳ ಕಾಲ ನೆನಪಿನಲ್ಲಿ ಉಳಿಯುವಂತಹ ಸಮ್ಮೇಳನ ಆಗಬೇಕು ಎಂದರು.

ಇದಕ್ಕೂ ಮೊದಲು ಜಿಲ್ಲಾಡಳಿತದ ಕಚೇರಿಯಲ್ಲಿ ಸಮ್ಮೇಳನಕ್ಕೆ ಸಿದ್ದತೆ ಕುರಿತ ಪ್ರಥಮ ಸಿದ್ಧತಾ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲೆಯ ಸಾಹಿತಿಗಳು, ಲೇಖಕರು, ಕವಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಪಾಲ್ಗೊಂಡಿದ್ದರು. ಕೊರೊನಾದಿಂದಾಗಿ ಎರಡು ವರ್ಷಗಳ ಕಾಲ ಸಾಹಿತ್ಯ ಸಮ್ಮೇಳನ ನಡೆಸಲು ಸಾಧ್ಯವಾಗಿಲ್ಲ.

Last Updated : Mar 28, 2022, 8:50 PM IST

For All Latest Updates

TAGGED:

ABOUT THE AUTHOR

...view details