ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ ಇಂದು 9 ಜನರಲ್ಲಿ ಕೊರೊನಾ ಪತ್ತೆ​​​: 19 ಸೋಂಕಿತರು ರಿಸ್ಚಾರ್ಜ್​ - Hirekere Taluk

ಹಾವೇರಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಇಂದು ಮತ್ತೆ 9 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 175ಕ್ಕೆ ಏರಿಕೆಯಾಗಿದೆ. 117 ಸಕ್ರಿಯ ಪ್ರಕರಣಗಳಿವೆ.

9 more coronavirus positive reported in Haveri Today
ಹಾವೇರಿಯಲ್ಲಿಂದು 9 ಜನರಿಗೆ ಕೊರೊನಾ ಪಾಸಿಟಿವ್​​​

By

Published : Jul 6, 2020, 7:31 PM IST

ಹಾವೇರಿ: ಜಿಲ್ಲೆಯಲ್ಲಿ ಇಂದ 9 ಜನರಿಗೆ ಕೊರೊನಾ ದೃಢಪಟ್ಟಿದ್ದು, ಶಿಗ್ಗಾವಿ ತಾಲೂಕು ಒಂದರಲ್ಲಿ ಆರು ಜನರಿಗೆ ಸೋಂಕು ತಗುಲಿದೆ.

ಹಾವೇರಿ, ಹಿರೇಕೆರೂರು ಹಾಗೂ ಹಾನಗಲ್ ತಾಲೂಕುಗಳಲ್ಲಿ ತಲಾ ಒಬ್ಬರಿಗೆ ಕೊರೊನಾ ಕಾಣಿಸಿಕೊಂಡಿದೆ. ಕೋವಿಡ್ ಆಸ್ಪತ್ರೆಯಿಂದ 19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ಯೋಗೇಶ್ವರ

ಸೋಮವಾರದ 19 ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 175ಕ್ಕೆ ಏರಿಕೆಯಾಗಿದೆ. ಈವರೆಗೆ 56 ಜನ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಜಿಲ್ಲೆಯಲ್ಲಿ 117 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ ಇಬ್ಬರು ಬಲಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ತಿಳಿಸಿದ್ದಾರೆ.

ABOUT THE AUTHOR

...view details