ಹಾವೇರಿ: ಜಿಲ್ಲೆಯಲ್ಲಿ ಇಂದು 90 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಒಂದು ಸಾವಾಗಿದ್ದು 88 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣನವರ್ ಮಾಹಿತಿ ನೀಡಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ 1669 ಕ್ಕೇರಿದೆ ಕೊರೊನಾ ಸೋಂಕಿತರ ಸಂಖ್ಯೆ: ಒಂದು ಸಾವು - Haveri latest news
ಹಾವೇರಿ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಒಂದು ಸಾವಾಗಿರುವುದು ದೃಢಪಟ್ಟಿದೆ. ಕೋವಿಡ್ ಆಸ್ಪತ್ರೆಗಳಿಂದ 88 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣನವರ್ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 1669 ಕ್ಕೇರಿದೆ. ರಾಣೆಬೆನ್ನೂರು ತಾಲೂಕಿನಲ್ಲಿ 40, ಶಿಗ್ಗಾವಿ ತಾಲೂಕಿನಲ್ಲಿ 12, ಹಾವೇರಿ ಮತ್ತು ಹಿರೇಕೆರೂರು ತಾಲೂಕುಗಳಲ್ಲಿ ತಲಾ 11 ಪ್ರಕರಣಗಳು ದೃಢಪಟ್ಟಿವೆ.
ಸವಣೂರು ತಾಲೂಕಿನಲ್ಲಿ 08, ಹಾನಗಲ್ ತಾಲೂಕಿನಲ್ಲಿ 05 ಮತ್ತು ಬ್ಯಾಡಗಿ ತಾಲೂಕಿನಲ್ಲಿ 03 ಪ್ರಕರಣಗಳು ಪತ್ತೆಯಾಗಿವೆ. ಇಂದು ವಿವಿಧ ಕೋವಿಡ್ ಆಸ್ಪತ್ರೆಗಳಿಂದ 88 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಒಂದು ಸಾವಾಗಿರುವುದು ದೃಢಪಟ್ಟಿದೆ. 173 ಜನ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 570 ಸೋಂಕಿತರು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.