ಕರ್ನಾಟಕ

karnataka

ETV Bharat / state

ಹಾವೇರಿ ಜಿಲ್ಲೆಯಲ್ಲಿಂದು 95 ಜನರಲ್ಲಿ ಕೊರೊನಾ ಸೋಂಕು ಪತ್ತೆ - ಹಾವೇರಿ ಜಿಲ್ಲೆಯಲ್ಲಿಂದು 95 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಜಿಲ್ಲೆಯಲ್ಲಿ 953 ಜನ ಕೊರೊನಾದಿಂದ ಗುಣಮುಖರಾಗಿದ್ದು, 776 ಸೋಂಕಿತರಿಗೆ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Haveri district
ಹಾವೇರಿ ಜಿಲ್ಲೆಯಲ್ಲಿಂದು 95 ಜನರಲ್ಲಿ ಕೊರೊನಾ ಸೋಂಕು ಪತ್ತೆ

By

Published : Aug 8, 2020, 11:07 PM IST

ಹಾವೇರಿ: ಜಿಲ್ಲೆಯಲ್ಲಿಂದು 95 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1764 ಕ್ಕೇರಿದೆ.

ಇಂದು ಜಿಲ್ಲಾ ಕೋವಿಡ್ ಆಸ್ಪತ್ರೆಗಳಿಂದ 40 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಹಾವೇರಿ ತಾಲೂಕಿನಲ್ಲಿ 38, ರಾಣೆಬೆನ್ನೂರು ತಾಲೂಕಿನಲ್ಲಿ 23, ಹಿರೇಕೆರೂರು ತಾಲೂಕಿನಲ್ಲಿ 16, ಬ್ಯಾಡಗಿ ತಾಲೂಕಿನಲ್ಲಿ 09, ಹಾನಗಲ್ ತಾಲೂಕಿನಲ್ಲಿ 05, ಶಿಗ್ಗಾವಿ ತಾಲೂಕಿನಲ್ಲಿ 03 ಹಾಗೂ ಸವಣೂರು ತಾಲೂಕಿನಲ್ಲಿ ಒಂದು ಪ್ರಕರಣ ಪತ್ತೆಯಾಗಿವೆ.

ಜಿಲ್ಲೆಯಲ್ಲಿಂದು ಕೊರೊನಾದಿಂದ ಇಬ್ಬರು ಸಾವನ್ನಪ್ಪಿದ್ದು, ಈವರೆಗೆ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 35 ಕ್ಕೇರಿದೆ. ಜಿಲ್ಲೆಯಲ್ಲಿ 953 ಜನ ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 186 ಜನರನ್ನ ಹೋಂ ಕ್ವಾರಂಟೈನ್‌ಲ್ಲಿರಿಸಲಾಗಿದ್ದು, 776 ಸೋಂಕಿತರಿಗೆ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

For All Latest Updates

ABOUT THE AUTHOR

...view details