ಕರ್ನಾಟಕ

karnataka

ETV Bharat / state

ಎಮ್ಮೆ‌ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ - ಕರಡಿ ದಾಳಿಯಿಂದ ವ್ಯಕ್ತಿಗೆ ಗಾಯ

ಶಿಗ್ಗಾಂವಿ ತಾಲೂಕಿನ ಗೌಳೇರ ದಡ್ಡಿ ಗ್ರಾಮದಲ್ಲಿ ಎಮ್ಮೆ‌ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ ಮಾಡಿದ್ದು, ತಲೆ, ಕೈ ಮತ್ತು ಕಾಲುಗಳಿಗೆ ಗಾಯಗಳಾಗಿವೆ.

A bear attack on a man in Shigavi Taluk
ಎಮ್ಮೆ‌ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

By

Published : Oct 18, 2020, 8:55 PM IST

ಶಿಗ್ಗಾಂವಿ: ತಾಲೂಕಿನ ಹೊಸೂರು ಗ್ರಾಮ ಪಂಚಾಯತ್​ ವ್ಯಾಪ್ತಿಯ ಗೌಳೇರ ದಡ್ಡಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ಮಾಡಿದ ಘಟನೆ ನಡೆದಿದೆ.

ಘಟನೆಯಲ್ಲಿ ರಾಮು ಎಡಗೆ ಎಂಬಾತನಿಗೆ ಗಾಯಗಳಾಗಿವೆ. ಎಮ್ಮೆ‌ ಮೇಯಿಸಲು ಹೋಗಿದ್ದ ವೇಳೆ ಕರಡಿ ಏಕಾಏಕಿ ದಾಳಿ ಮಾಡಿದ್ದು, ತಲೆ, ಕೈ ಮತ್ತು ಕಾಲುಗಳಿಗೆ ಗಾಯಗಳಾಗಿವೆ.

ಗಾಯಾಳುವಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ಮೇಲೆ ನಡೆದ ಕರಡಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ABOUT THE AUTHOR

...view details