ಹಾವೇರಿ: ಈಜು ಬಾರದೆ ನೀರಿನಲ್ಲಿ ಮುಳುಗಿ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ನಗರದ ಜಿ.ಹೆಚ್. ಕಾಲೇಜಿನ ಗುರುಕೃಪಾ ಈಜುಕೊಳದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಬಾಲಕನನ್ನು ಮಯೂರಶೆಟ್ಟಿ ಎಂದು ಗುರುತಿಸಲಾಗಿದೆ.
ಹಾವೇರಿ: ಈಜು ಬಾರದೆ ನೀರಿನಲ್ಲಿ ಮುಳುಗಿ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ನಗರದ ಜಿ.ಹೆಚ್. ಕಾಲೇಜಿನ ಗುರುಕೃಪಾ ಈಜುಕೊಳದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಬಾಲಕನನ್ನು ಮಯೂರಶೆಟ್ಟಿ ಎಂದು ಗುರುತಿಸಲಾಗಿದೆ.
ಸ್ನೇಹಿತರೊಂದಿಗೆ ಈಜಲು ಈಜುಕೊಳಕ್ಕೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಈಜುಕೊಳದಲ್ಲಿ ಅವಗಡ ಸಂಭವಿಸಿದಾಗ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಘಟನೆ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.