ಹಾವೇರಿ:ಮಲಗಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದ ಚಿದಂಬರ ನಗರದಲ್ಲಿ ನಡೆದಿದೆ.
ಹಾವೇರಿ: ಮಲಗಿದ್ದ ವೇಳೆ ಹೃದಯಾಘಾತದಿಂದ ಬಸ್ ಚಾಲಕ ಸಾವು
ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಚಿದಂಬರ ನಗರದಲ್ಲಿ ಮಲಗಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
A driver dies of a heart attack in Haveri
ಸಂಗಮೇಶ ದೇಸಾಯಿ (40) ಹೃದಯಾಘಾತದಿಂದ ಸಾವನ್ನಪ್ಪಿದ ಮೃತ ಚಾಲಕ ಎಂದು ಗುರುತಿಸಲಾಗಿದೆ. ಈತ ಮೂಲತಃ ರೋಣ ತಾಲೂಕಿನ ಅರಹುಣಸಿ ಗ್ರಾಮದ ನಿವಾಸಿಯಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಹಾನಗಲ್ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಲಗಿದ್ದ ವೇಳೆ ಹೃದಯಾಘಾತವಾಗಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹಾನಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.