ಹಾವೇರಿ:ಸಾಲಬಾಧೆಯಿಂದ ಬೇಸತ್ತು ರೈತನೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಇದನ್ನು ಖಂಡಿಸಿ ಅನ್ನದಾತರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ವಿಷ ಸೇವಿಸಿ ರೈತ ಆತ್ಮಹತ್ಯೆ : ಆಸ್ಪತ್ರೆ ಎದುರು ಅನ್ನದಾತರ ಪ್ರತಿಭಟನೆ - ರೈತನೊರ್ವ ಆತ್ಮಹತ್ಯೆ
ಸಾಲಬಾಧೆಯಿಂದ ಬೇಸತ್ತು ರೈತನೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ರೈತನೊರ್ವ ಆತ್ಮಹತ್ಯೆ
ರಾಣೇಬೆನ್ನೂರು ತಾಲೂಕಿನ ಐರಣಿ ಗ್ರಾಮದ ರೈತ ಗುರುಮೂರ್ತಿ ತಂದೆ ಕೊಟ್ರಪ್ಪ ಚಳಗೇರಿ ಆತ್ಮಹತ್ಯೆಗೆ ಶರಣಾಗಿರುವ ರೈತ. ಸಾಲದ ಭಾದೆಯಿಂದ ಬೇಸತ್ತಿದ್ದ ಗುರುಮೂರ್ತಿ ತಮ್ಮ ಕೃಷಿ ಭೂಮಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಗೆ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ತಾಲೂಕು ಆಸ್ಪತ್ರೆಗೆ ಆಗಮಿಸಿದ ರೈತರು ಮೃತ ರೈತನ ಶವವಿಟ್ಟು ಪ್ರತಿಭಟನೆ ನಡೆಸಿದರು.
ರೈತನ ಸಾವಿಗೆ ಬ್ಯಾಂಕ್ ಅಧಿಕಾರಿಗಳು ಮತ್ತು ಖಾಸಗಿ ಲೇವಾದೇವಿದಾರರ ಕಾಟವೇ ಕಾರಣ ಎಂದು ಆರೋಪಿಸಿದರು.