ಹಾವೇರಿ :ಪರಿಶಿಷ್ಟ ಜಾತಿಯವರಿಗೆ ನೀಡುವ ಜಮೀನು ಮಂಜೂರಾತಿಗೆ ₹25 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಪ್ರಥಮ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ನಡೆದಿದೆ.
ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಪ್ರಥಮ ದರ್ಜೆ ಸಹಾಯಕ - ACB attack
ಎಸಿಬಿ ಡಿವೈಎಸ್ಪಿ ಸೋಮಲಿಂಗ ಕುಂಬಾರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಬಂಧಿತ ತಿಪ್ಪೇಸ್ವಾಮಿ ಸೇರಿ ನಾಲ್ವರ ವಿರುದ್ಧ ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
45 ವರ್ಷದ ಪ್ರಥಮ ದರ್ಜೆ ಸಹಾಯಕ ತಿಪ್ಪೇಸ್ವಾಮಿ ಎಂಬುವರು ಎಸಿಬಿ ಬಲೆಗೆ ಬಿದ್ದ ಆರೋಪಿ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಪದ್ಮಾವತಿಪುರದ ಸಿದ್ದಪ್ಪ ಲಮಾಣಿ ಎಂಬುವರಿಂದ ಲಂಚ ಸ್ವೀಕರಿಸುತ್ತಿದ್ದರು.
ಈ ವೇಳೆ ತಿಪ್ಪೇಸ್ವಾಮಿ ಎಸಿಬಿ ಬಲೆಗೆ ಬಿದ್ದಿದ್ದಾನೆ. ಎಸಿಬಿ ಡಿವೈಎಸ್ಪಿ ಸೋಮಲಿಂಗ ಕುಂಬಾರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಬಂಧಿತ ತಿಪ್ಪೇಸ್ವಾಮಿ ಸೇರಿ ನಾಲ್ವರ ವಿರುದ್ಧ ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.