ಕರ್ನಾಟಕ

karnataka

ETV Bharat / state

ಹಿರೇಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ; ನಿಷ್ಕಾಳಜಿಗೆ ಸಾರ್ವಜನಿಕರ ಛೀಮಾರಿ

ಹಾವೇರಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಎಲ್ಲೆಡೆ ಮುಂದುವರೆದಿದೆ. ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಿದೆ. ಈ ನಡುವೆ ಹಿರೇಕೆರೂರು ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಅವ್ಯವಸ್ಥೆ ಹಾಗೂ ವೈದ್ಯರ ನಿಷ್ಕಾಳಜಿಗೆ ಸಾರ್ವಜನಿಕರು ಛೀಮಾರಿ ಹಾಕಿದ್ದಾರೆ.

A mess at a government hospital
ಹಿರೇಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ

By

Published : Sep 17, 2020, 11:32 PM IST

ಹಾವೇರಿ:ಜಿಲ್ಲೆಯ ಹಿರೇಕೆರೂರು ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಡೆಡಿಕೆಟೆಡ್​ ಕೋವಿಡ್ ಹೆಲ್ತ್​​ ಕೇರ್​​ ಸೆಂಟರ್​​ನಲ್ಲಿನ ಅವ್ಯವಸ್ಥೆ ಕಂಡು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಹಿರೇಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ

ನಿತ್ಯ ಸಾಕಷ್ಟು ಪ್ರಮಾಣದ ರೋಗಿಗಳು ಈ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಂಡು ಹೋಗುತ್ತಾರೆ. ಆದರೆ, ಆಸ್ಪತ್ರೆಯಲ್ಲಿ ಸ್ವಚ್ಛತೆ ಎಂಬುದೇ ಇಲ್ಲ. ಎಲ್ಲಿ ನೋಡಿದರಲ್ಲಿ ಗಲೀಜು, ತ್ಯಾಜ್ಯ ವಸ್ತುಗಳೇ ಕಾಣಿಸುತ್ತವೆ.

ಹಿರೇಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ

ಅಲ್ಲದೇ ಆಸ್ಪತ್ರೆಗೆ ಬಂದವರಿಗೆ ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿ ಚಿಕಿತ್ಸೆ ಸಹ ನೀಡುತ್ತಿಲ್ಲ. ಆದ್ದರಿಂದ ಈ ಕೂಡಲೇ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಯತ್ತ ಗಮನ ಹರಿಸಬೇಕು.ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುವಂತೆ ಮಾಡಬೇಕು ಎಂದು ತಾಲೂಕು ಜೆಡಿಎಸ್ ಘಟಕ ಒತ್ತಾಯಿಸಿದೆ. ಈ ಸಂಬಂಧ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಹಿರೇಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ

ABOUT THE AUTHOR

...view details