ಹಾವೇರಿ: ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದ ಆನಿಕೇರಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನ ಸಾವಿತ್ರಿ(16) ದೊಡ್ಡಮನಿ ಎಂದು ಗುರುತಿಸಲಾಗಿದೆ.
ಶಾಲೆಗೆ ತೆರಳಿದ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ! - ಹಾವೇರಿ ಕೆರೆಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ
ಶಾಲೆಗೆ ತೆರಳಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಶವವಾಗಿ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಹಾವೇರಿಯ ಆನಿಕೇರಿಯಲ್ಲಿ ನಡೆದಿದೆ.
![ಶಾಲೆಗೆ ತೆರಳಿದ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ! Kn_hvr_03_st](https://etvbharatimages.akamaized.net/etvbharat/prod-images/768-512-16325514-thumbnail-3x2-vny.jpg)
ಶಾಲೆಗೆ ತೆರಳಿದ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ
ಶಾಲೆಗೆ ತೆರಳಿದ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ
ಸಾವಿತ್ರಿ ಪಟ್ಟಣದ ಜನತಾ ಬಾಲಕಿಯರ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನು ಕೆರೆಯಿಂದ ಬಾಲಕಿಯ ಮೃತದೇಹ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಳಗ್ಗೆ ಶಾಲೆಗೆ ಹೋಗುವುದಾಗಿ ಹೇಳಿ ಹೋಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳು ವ್ಯಕ್ತವಾಗಿವೆ. ಬಾಲಕಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಾನಗಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ 7 ಕಾರ್ಮಿಕರು ಶಂಕೆ