ಹಾವೇರಿ: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಕಡಿಮೆ ಅಂಕ ಬಂದಿವೆ ಎಂದು ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಫಸ್ಟ್ ಕ್ಲಾಸ್ನಲ್ಲಿ ಪಾಸ್ ಆದ್ರೂ ವಿದ್ಯಾರ್ಥಿನಿ ಆತ್ಮಹತ್ಯೆ... ಕಾರಣ? - ಎಸ್ಎಸ್ಎಲ್ಸಿ ಪರೀಕ್ಷೆ 2020
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣ ಮನನೊಂದು, ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
ಬ್ಯಾಡಗಿ ತಾಲೂಕಿನ ಕಾಶಂಬಿ ಗ್ರಾಮದ 16 ವರ್ಷದ ಭಾರತಿ ಕೋಟಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಫಲಿತಾಂಶದಲ್ಲಿ ಪ್ರತಿಶತ 64 ಅಂಕ ಬಂದಿದ್ದರೂ ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮೃತ ವಿದ್ಯಾರ್ಥಿನಿ ಬ್ಯಾಡಗಿ ತಾಲೂಕು ಕಾಗಿನೆಲೆಯ ಕನಕದಾಸ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಾಗಿನೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.