ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಮೃತಪಟ್ಟ ಶಿಕ್ಷಕನನ್ನ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಮತ್ತಿಕೇರಿಯ 56 ವರ್ಷದ ಜಿಎಂ ಸಂಗನಗೌಡ ಎಂದು ಗುರುತಿಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಸಂಗನಗೌಡ ನಗರದ ಗೆಳೆಯರ ಬಳಗದ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ಸಂಗನಗೌಡರಿಗೆ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತಕ್ಷಣ ಶಿಕ್ಷಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕ ಕೊನೆಯುಸಿರೆಳೆದಿದ್ದಾರೆ.
86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಮಂಡ್ಯದ ಶಿಕ್ಷಕ ಸಾವು - ಶಿಕ್ಷಕ ಸಂಗನಗೌಡರು ನಿನ್ನೆ ರಾತ್ರಿ ಮೃತ
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಸಾವು- ಮಂಡ್ಯದಿಂದ ಹಾವೇರಿಗೆ ಆಗಮಿಸಿದ್ದ ಶಿಕ್ಷಕ- ಚಿಕಿತ್ಸೆ ಫಲಿಸದೇ ಶಿಕ್ಷಕ ಸಾವು
![86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಮಂಡ್ಯದ ಶಿಕ್ಷಕ ಸಾವು teacher died who had arrived Kannada Sahitya Sammelana in Haveri Kannada Sahitya Sammelana news ಸಾಹಿತ್ಯ ಸಮ್ಮೇಳನಕ್ಕೆ ಆಮಗಸಿದ್ದ ಮಂಡ್ಯದ ಶಿಕ್ಷಕ ಸಾವು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಮಗಸಿದ್ದ ಮಂಡ್ಯದ ಶಿಕ್ಷಕ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಮಗಸಿದ್ದ ಶಿಕ್ಷಕ ಸಾವು ಚಿಕಿತ್ಸೆ ಫಲಿಸದೇ ಶಿಕ್ಷಕ ಸಾವು ಕನ್ನಡ ಸಾಹಿತ್ಯ ಸಮ್ಮೇಳನ ಗೆಳೆಯರ ಬಳಗದ ಶಾಲೆಯಲ್ಲಿ ವಾಸ್ತವ್ಯ ಶಿಕ್ಷಕ ಸಂಗನಗೌಡರು ನಿನ್ನೆ ರಾತ್ರಿ ಮೃತ](https://etvbharatimages.akamaized.net/etvbharat/prod-images/768-512-17419676-thumbnail-3x2-sefed.jpg)
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಮಗಸಿದ್ದ ಮಂಡ್ಯದ ಶಿಕ್ಷಕ ಸಾವು
ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಸಂಗನಗೌಡರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿಯೇ ಅವರ ಮೃತದೇವವನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಗಿದೆ. ಈ ಘಟನೆ ಹಾವೇರಿ ಶಹರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.
ಓದಿ:ಕನ್ನಡಕ್ಕೆ ಆಪತ್ತು ತರುವ ಶಕ್ತಿ ವಿಶ್ವದಲ್ಲೇ ಹುಟ್ಟಿಲ್ಲ, ಹುಟ್ಟುವುದೂ ಇಲ್ಲ: ಬಸವರಾಜ್ ಬೊಮ್ಮಾಯಿ ಸ್ಪಷ್ಟ ನುಡಿ