ಹಾವೇರಿ:ಕೊರೊನಾ ಸೋಂಕು ಹರಡೋದನ್ನ ತಡೆಯೋ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸ್ತಿರೋ ಪೊಲೀಸ್ ಸಿಬ್ಬಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ವತಿಯಿಂದ ಮಾಸ್ಕ್ ವಿತರಣೆ ಮಾಡಲಾಯಿತು.
ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ವಿತರಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ - ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂಧಿಗಳಿಗೆ ಮಾಸ್ಕ್ ವಿತರಣೆ
ಹಾವೇರಿ ನಗರದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ವತಿಯಿಂದ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ವಿತರಣೆ ಮಾಡಲಾಗಿದೆ.
ಕರ್ತವ್ಯ ನಿರತ ಪೊಲೀಸ್ ಸಿಬ್ಬಂಧಿಗಳಿಗೆ ಮಾಸ್ಕ್ ವಿತರಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಂಡ
ನಗರದ ಹೊಸಮನಿ ಸಿದ್ದಪ್ಪ ವೃತ್ತ ಸೇರಿದಂತೆ ಪೊಲೀಸರು ಕರ್ತವ್ಯ ನಿರ್ವಹಿಸ್ತಿರೋ ಸ್ಥಳಕ್ಕೆ ತೆರಳಿ ಮಾಸ್ಕ್ ವಿತರಿಸಿದ್ದಾರೆ. ಇಷ್ಟೆ ಅಲ್ಲದೇ ಇವರ ಜೊತೆಗೆ ಪೌರ ಕಾರ್ಮಿಕರು ಹಾಗೂ ಮಾಸ್ಕ್ ಧರಿಸದೇ ಓಡಾಡೋ ಜನರಿಗೂ ನೀಡಿದ್ದಾರೆ.
ಕಾಟನ್ ಬಟ್ಟೆಯಿಂದ ತಯಾರಿಸಿದ ಮಾಸ್ಕ್ಗಳನ್ನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ವಿತರಣೆ ಮಾಡಲಾಯಿತು.