ಕರ್ನಾಟಕ

karnataka

ETV Bharat / state

ಹಾನಗಲ್‌: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು - Hanagal crime news

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸುರಳೇಶ್ವರ ಗ್ರಾಮದ ಕೆರೆಗೆ ಯುವಕನೊಬ್ಬ ಕಾಲು ಜಾರಿ ಕೆರೆಗೆ ಬಿದ್ದು ಸಾವಿಗೀಡಾದ ಘಟನೆ ನಡೆದಿದೆ.

Died
Died

By

Published : May 31, 2020, 4:58 PM IST

ಹಾನಗಲ್ : ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸುರಳೇಶ್ವರ ಗ್ರಾಮದ ಕೆರೆಯಲ್ಲಿ ನಡೆದಿದೆ.

ರಿಯಾಜ್ ಮುಲ್ಲಾ (28) ಮೃತ ಯುವಕ. ಇವರು ಶಾಂತಿನಗರದ ನಿವಾಸಿಯಾಗಿದ್ದು, ಕೆರೆಯ ಬಳಿಯಿದ್ದ ಹೂವು ಕೀಳಲು ಹೋಗಿದ್ದಾಗ ಆಯತಪ್ಪಿ ಕೆರೆಗೆ ಬಿದ್ದಿದ್ದಾರೆ.

ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ‌ ಯುವಕನ ಮೃತದೇಹ ಹೊರತೆಗೆದಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ABOUT THE AUTHOR

...view details