ಹಾವೇರಿ:ಬೈಕ್ಗೆ ಕಾರ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಬೈಕ್ ಸವಾರರು: ಚಿಕಿತ್ಸೆ ಫಲಿಸದೆ ಸಾವು - accident between bike -car
ನಿನ್ನೆ ರಾತ್ರಿ ಹಾವೇರಿ ತಾಲೂಕಿನ ಕುಳೇನೂರ ಕ್ರಾಸ್ ಬಳಿ ಕಾರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಈ ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿದ್ದರು. ಇವರು ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಿನ್ನೆ ರಾತ್ರಿ ಹಾವೇರಿ ತಾಲೂಕಿನ ಕುಳೇನೂರ ಕ್ರಾಸ್ ಬಳಿ ಕಾರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನು ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ರು. ಆದ್ರೆ ಚಿಕಿತ್ಸೆ ಫಲಿಸದೆ ಇಬ್ಬರೂ ಮೃತಪಟ್ಟಿದ್ದಾರೆ.
ಮೃತರನ್ನು ಸುರೇಶ ತಿಮ್ಮಣ್ಣವರ ಹಾಗೂ ಉಡಚಪ್ಪ ದೊಡ್ಡಮನಿ ಎಂದು ಗುರುತಿಸಲಾಗಿದೆ. ಮೃತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಹುಲ್ಲಾಳ ಮತ್ತು ತುಮರಿಕೊಪ್ಪ ಗ್ರಾಮದಲ್ಲಿ ಗ್ರಾಮ ಸಹಾಯಕರಾಗಿ ಕೆಲಸ ಮಾಡ್ತಿದ್ರು. ಹಾವೇರಿಯಿಂದ ಚಿಕ್ಕಹುಲ್ಲಾಳ ಗ್ರಾಮದತ್ತ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿತ್ತು. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.