ಹಾವೇರಿ: ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕೊಂಡೋಜಿ ಗ್ರಾಮದ ಬಳಿ ಸಂಭವಿಸಿದೆ.
ಹೋರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿ ಬೈಕ್ ಸ್ಕಿಡ್... ಸವಾರ ಸಾವು - ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವು
ಹಾನಗಲ್ ತಾಲೂಕಿನ ಕೊಂಡೋಜಿ ಗ್ರಾಮದ ಬಳಿ ಎದುರಿಗೆ ಬರುತ್ತಿದ್ದ ಹೋರಿಗೆ ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
![ಹೋರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿ ಬೈಕ್ ಸ್ಕಿಡ್... ಸವಾರ ಸಾವು haveri accident latest news](https://etvbharatimages.akamaized.net/etvbharat/prod-images/768-512-5408186-thumbnail-3x2-megha.jpg)
ಹಾವೇರಿ ರಸ್ತೆ ಅಪಘಾತ
ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವು
ಮೃತನನ್ನು ಶಿಗ್ಗಾವಿ ತಾಲೂಕಿನ ಹನುಮರಳ್ಳಿಯ ಬಾಬು ಕುರಿ (50) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಹನುಮರಳ್ಳಿಯಿಂದ ನಿಟ್ಟೂರಿಗೆ ಹೋಗುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಹೋರಿಗೆ ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬೈಕ್ ಸ್ಕಿಡ್ ಆಗಿ ಬಿದ್ದು ಬಾಬು ಸಾವನ್ನಪ್ಪಿದ್ದಾರೆ.
ಇನ್ನು ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.