ಹಾವೇರಿ:ಎತ್ತಿನಬಂಡಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದ ಬಳಿ ನಡೆದಿದೆ.
ಎತ್ತಿನಬಂಡಿಗೆ ಬೈಕ್ ಡಿಕ್ಕಿ; ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ - ಬೈಕ್ ಸವಾರರು ಮೃತ
ಎತ್ತಿನ ಬಂಡಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿಯ ಕುರುಬಗೊಂಡ ಗ್ರಾಮದ ಬಳಿ ನಡೆದಿದೆ.
accident
ಮೃತರನ್ನ ಅಭಿಷೇಕ ಆನ್ವೇರಿ(19) ಮತ್ತು ಆಂಜನೇಯ ದೊಡ್ಡಮನಿ(18) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.