ರಾಣೆಬೆನ್ನೂರು ಬಳಿ ಟಿಪ್ಪರ್ ಡಿಕ್ಕಿ: ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳ ದುರ್ಮರಣ - ರಾಣೆಬೆನ್ನೂರ ಬಳಿ ಅಪಘಾತ
17:08 February 25
ಒಂದೇ ಕುಟುಂಬದ ನಾಲ್ವರು ಸಾವು
ರಾಣೆಬೆನ್ನೂರು: ಬೈಕ್ಗೆ ಟಿಪ್ಪರ್ ಡಿಕ್ಕಿಯಾಗಿ ಗಂಡ - ಹೆಂಡತಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಣೆಬೆನ್ನೂರು ತಾಲೂಕಿನ ಇಟಗಿ ಗ್ರಾಮದ ಬಳಿ ನಡೆದಿದೆ.
ರಾಣೆಬೆನ್ನೂರು ತಾಲೂಕಿನ ಮುದೇನೂರ ಗ್ರಾಮದ ಸಿದ್ದಪ್ಪ ನಾಗೇನಹಳ್ಳಿ(45), ಪತ್ನಿ ಅನುಸೂಯಮ್ಮ(35) ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಮುದೇನೂರ ಗ್ರಾಮದಿಂದ ವೇಗವಾಗಿ ಬರುತ್ತಿದ್ದ ಟಿಪ್ಪರ್ ವಾಹನ, ಎದುರಿಗೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಸ್ಥಳಕ್ಕೆ ಹಲಗೇರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.