ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ ಮತ್ತೆ ಕೊರೊನಾ ಆರ್ಭಟ.. ಒಂದೇ ದಿನ 80 ಮಂದಿಗೆ ಸೋಂಕು - ಹಾವೇರಿ

ಮದುವೆ ಸಮಾರಂಭಗಳಿಗೆ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ. ಅನುಮತಿ ಇಲ್ಲದೇ ಯಾವುದೇ ಮುಂಜಾಗೃತಾ ಕೈಗೊಳ್ಳದ ಕಲ್ಯಾಣ ಮಂಟಪಗಳಿಗೆ 25 ಸಾವಿರ ರೂಪಾಯಿ ದಂಡ ಹಾಕಲಾಗುವುದು..

DC Sanjaya shettananava
ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ್

By

Published : Dec 1, 2020, 12:45 PM IST

ಹಾವೇರಿ : ಜಿಲ್ಲೆಯಲ್ಲಿ ಒಂದೇ ದಿನ ಅತಿಥಿ ಉಪನ್ಯಾಸಕರು ಸೇರಿದಂತೆ 80 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಾಲೇಜು ಪುನಾರಂಭ, ಮದುವೆ ಸಮಾರಂಭಗಳು, ಹೋರಿ ಬೆದರಿಸುವ ಸ್ವರ್ಧೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಜನರು ಯಾವುದೇ ಮುಂಜಾಗೃತಾ ಕ್ರಮಗಳನ್ನ ಕೈಗೊಳ್ಳದಿರುವುದೇ ಇದಕ್ಕೆ ಕಾರಣ ಎಂದು ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ್ ತಿಳಿಸಿದ್ದಾರೆ.

ಕೊರೊನಾ ಕಡಿಮೆಯಾಗುತ್ತಿದ್ದಂತೆ ಜನರಲ್ಲಿ ನಿರ್ಲಕ್ಷ್ಯ ಧೋರಣೆ ಅಧಿಕವಾಗಿದೆ. ಜನ ಮಾಸ್ಕ್ ಧರಿಸದೆ ಸಾಮಾಜಿಕ ಅಂತರ ಪಾಲಿಸದೇ ಸ್ಯಾನಿಟೈಜರ್ ಬಳಕೆ ಮಾಡುತ್ತಿಲ್ಲ. ಇದರಿಂದಾಗಿ ಕೊರೊನಾ ಅಧಿಕವಾಗುತ್ತಿದೆ. ಈ ಹಿನ್ನೆಲೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಪಾಲಿಸಬೇಕು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ್

ಮದುವೆ ಸಮಾರಂಭಗಳಿಗೆ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ. ಅನುಮತಿ ಇಲ್ಲದೇ ಯಾವುದೇ ಮುಂಜಾಗೃತಾ ಕೈಗೊಳ್ಳದ ಕಲ್ಯಾಣ ಮಂಟಪಗಳಿಗೆ 25 ಸಾವಿರ ರೂಪಾಯಿ ದಂಡ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಪರಿಸ್ಥಿತಿ ಇದೇ ರೀತಿ ಮುಂದುವರೆದ್ರೆ ಹಾವೇರಿ, ಹಾನಗಲ್ ಮತ್ತು ರಾಣೆಬೆನ್ನೂರು ತಾಲೂಕುಗಳ ಕಾಲೇಜಗಳ ತರಗತಿಗಳನ್ನ ಬಂದ್ ಮಾಡುವ ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details