ಕರ್ನಾಟಕ

karnataka

ETV Bharat / state

ಅಂಗನವಾಡಿ ಕಾರ್ಯಕರ್ತೆ ಬಲಿಯಾಗಲು ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಹೊನ್ನಪ್ಪ ಮರೆಮ್ಮನವರ್

ಹಾವೇರಿ ಜಿಲ್ಲೆಯಲ್ಲಿ ಸೋಮವಾರ ಕೊರೊನಾಕ್ಕೆ ಅಂಗನವಾಡಿ ಕಾರ್ಯಕರ್ತೆ ಬಲಿಯಾಗಿದ್ದಾಳೆ. ಇದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಎಐಟಿಯುಸಿ ಹಾವೇರಿ ಜಿಲ್ಲಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ್ ಆರೋಪಿಸಿದ್ದಾರೆ.

Haveri
ಎಐಟಿಯುಸಿ ಹಾವೇರಿ ಜಿಲ್ಲಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ್

By

Published : Aug 18, 2020, 8:49 PM IST

ಹಾವೇರಿ: ಜಿಲ್ಲೆಯಲ್ಲಿ ಕೊರೊನಾದಿಂದ ಅಂಗನವಡಿ ಕಾರ್ಯಕರ್ತೆ ಬಲಿಯಾಗಲು ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಎಐಟಿಯುಸಿ ಹಾವೇರಿ ಜಿಲ್ಲಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ್ ಆರೋಪಿಸಿದ್ದಾರೆ.

ಎಐಟಿಯುಸಿ ಹಾವೇರಿ ಜಿಲ್ಲಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ್

ಜಿಲ್ಲೆಯಲ್ಲಿ ಮಾತನಾಡಿದ ಅವರು, ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊರೊನಾದಿಂದ ರಕ್ಷಣೆ ನೀಡುವ ಪರಿಕರ ನೀಡದಿರುವುದೇ ಕಾರಣ ಎಂದು ಆರೋಪಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಪ್ರತಿದಿನಕ್ಕೆ 100 ಮನೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಾರೆ. ಆಹಾರ ಸಾಮಗ್ರಿ ನೀಡುತ್ತಾರೆ. ವಿವಿಧ ಲಸಿಕೆಗಳನ್ನು ಹಾಕಿಸುವ ಕಾರ್ಯ ಮಾಡುತ್ತಾರೆ. ಆದರೆ ಇವರಿಗೆ ಸರ್ಕಾರದಿಂದ ಮಾಸ್ಕ್ ಆಗಲಿ ಪಿಪಿಇ ಕಿಟ್‌ ಆಗಲಿ ಸ್ಯಾನಿಟೈಸರ್ ಸಹ ನೀಡಿಲ್ಲ ಎಂದು ಆರೋಪಿಸಿದರು.

ತಾಲೂಕಿನ ದಿಡಗೂರಿನಲ್ಲಿ ಕೊರೊನಾದಿಂದ ಸಾವನ್ನಪ್ಪಿರುವ ಅಂಗನವಾಡಿ ಕಾರ್ಯಕರ್ತೆಗೆ ಸರ್ಕಾರ 30 ಲಕ್ಷ ರೂಪಾಯಿ ಪರಿಹಾರ ಹಣ ನೀಡಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details