ಹಾವೇರಿ: ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಕಲ್ಯಾಣ ವರ್ಗಗಳ ಜನರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ಮಾಡುತ್ತಲೇ ಇದೆ. ಆದರೆ, ಅವುಗಳ ಸರಿಯಾದ ಸದ್ಬಳಕೆಯಾಗದೆ ಹಾಳುಗುತ್ತಿರುವುದು ಸರ್ಕಾರದ ಗಮನಕ್ಕೆ ಬರುತ್ತಿಲ್ಲ.
ಹೌದು, ರಾಣೆಬೆನ್ನೂರು ನಗರದ ಶ್ರೀರಾಮ ನಗರದಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ದೊರೆಯದೆ ತನ್ನ ಸೌಂದರ್ಯವನ್ನು ಕಳೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ 2012-13 ನೇ ಸಾಲಿನ ಪರಿಶಿಷ್ಟ ಜಾತಿ ಕ್ರೂಢೀಕೃತ ಅನುದಾನ ಮೂಲಕ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗೆ ನೀಡಲಾಗಿತ್ತು. ಈ ಕಾಮಗಾರಿಯನ್ನು ಜಿಲ್ಲಾ ನಿರ್ಮಿತಿ ಕೇಂದ್ರ ಸುಮಾರು 1 ಕೋಟಿ 67 ಲಕ್ಷ ಅನುದಾನವನ್ನು ಬಳಸಿಕೊಂಡು ಸುಸಜ್ಜಿತ ಭವನ ನಿರ್ಮಾಣ ಮಾಡಿದೆ.