ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ ನಿನ್ನೆ ತಂದೆಗೆ, ಇಂದು ಮಗಳಲ್ಲಿ ಕೊರೊನಾ ದೃಢ! - ಹಾವೇರಿ ಲೆಟೆಸ್ಟ್​ ಕೊರೊನಾ ಅಪ್​ಡೇಟ್​

ಮುಂಬೈನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿ ಆಗಿದ್ದ 24 ವರ್ಷದ ಪಿ-3730 ಯುವತಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಯುವತಿ ಮೇ 19ರಂದು ಕಾರಿನಲ್ಲಿ ತಂದೆ- ತಾಯಿಯೊಂದಿಗೆ ಶಿಗ್ಗಾಂವಿಗೆ ಆಗಮಿಸಿದ್ದರು‌. ನಿನ್ನೆ ಯುವತಿಯ ತಂದೆಯಲ್ಲಿ ಸೋಂಕು ದೃಢಪಟ್ಟಿದ್ದು, ಇಂದು ಮಗಳಲ್ಲಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆ ಆಗಿದೆ.

Haveri
ಹಾವೇರಿಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್

By

Published : Jun 2, 2020, 9:35 PM IST

ಹಾವೇರಿ:ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.


ಮುಂಬೈನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿ ಆಗಿದ್ದ 24 ವರ್ಷದ ಪಿ-3730 ಯುವತಿಯಲ್ಲಿ ಸೋಂಕು ಪತ್ತೆಯಾಗಿದೆ. ಯುವತಿ ಮೇ 19ರಂದು ಕಾರಿನಲ್ಲಿ ತಂದೆ- ತಾಯಿಯೊಂದಿಗೆ ಶಿಗ್ಗಾಂವಿ ಪಟ್ಟಣಕ್ಕೆ ಆಗಮಿಸಿದ್ದರು‌. ನಿನ್ನೆ ಯುವತಿಯ ತಂದೆಯಲ್ಲಿ ಸೋಂಕು ದೃಢಪಟ್ಟಿದ್ದು, ಇಂದು ಮಗಳಲ್ಲಿ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.


ಸೋಂಕಿತರನ್ನು ಶಿಗ್ಗಾವಿಯ ಜಕ್ಕಿನಕಟ್ಟಿ ಗ್ರಾಮದ ಬಳಿ ಇರುವ ರಾಣಿ ಚೆನ್ನಮ್ಮ ಸರ್ಕಾರಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಮೇ 24 ರಂದು ಯುವತಿಯ ಗಂಟಲು ದ್ರವವನ್ನು ಆರೋಗ್ಯ ಇಲಾಖೆ ಲ್ಯಾಬ್​ಗೆ ಕಳಿಸಿತ್ತು. ಇಂದು ಬಂದ ವರದಿಯಲ್ಲಿ ಸೋಂಕು ದೃಢ ಪಟ್ಟಿದೆ.

ಇನ್ನು ಜಿಲ್ಲೆಯಲ್ಲಿ ಒಟ್ಟು 6 ಜನ ಸೋಂಕಿತರು ಗುಣಮುಖರಾಗಿದ್ದು, 10 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details