ಕರ್ನಾಟಕ

karnataka

ETV Bharat / state

ಶಾಸಕ ನೆಹರು ಓಲೇಕಾರ್‌ಗೆ ಸಚಿವ ಸ್ಥಾನ ನೀಡಲು ಸಿಎಂಗೆ ಅಭಿಮಾನಿಗಳ ಮನವಿ - haveri latest news

ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಶಾಸಕ ನೆಹರು ಓಲೇಕಾರ್‌ಗೆ ಸಚಿವ ಸ್ಥಾನ ಕೊಡಿಸುವ ಪ್ರಯತ್ನ ಆರಂಭವಾಗಿದೆ. ಇದೇ 15ರಂದು ಸಿಎಂ ಯಡಿಯೂರಪ್ಪ ಜಿಲ್ಲೆಯ ಕಂಚಾರಗಟ್ಟಿಗೆ ಬರುತ್ತಿದ್ದು, ಅಲ್ಲಿ ಅವರಿಗೆ ಮನವಿ ಸಲ್ಲಿಸುವುದಾಗಿ ಅಭಿಮಾನಿಗಳು ತಿಳಿಸಿದ್ದಾರೆ.

Appeals to CM as MLA Nehru Olekar to be made minister
ಶಾಸಕ ನೆಹರು ಓಲೇಕಾರ್‌ಗೆ ಸಚಿವ ಸ್ಥಾನ ಕೊಡಲು ಅಭಿಮಾನಿಗಳಿಂದ ಸಿಎಂಗೆ ಮನವಿ

By

Published : Jan 11, 2020, 9:45 AM IST

ಹಾವೇರಿ: ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಶಾಸಕ ನೆಹರು ಓಲೇಕಾರ್‌ಗೆ ಸಚಿವ ಸ್ಥಾನ ಕೊಡಿಸುವ ಪ್ರಯತ್ನ ಆರಂಭವಾಗಿದೆ.

ಈ ಕುರಿತಂತೆ ಓಲೇಕಾರ್​ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ. ಪ್ರಸ್ತುತ ಸಚಿವ ಸಂಪುಟದಲ್ಲಿ ಬಲಗೈ ಸಮುದಾಯಕ್ಕೆ ಸ್ಥಾನ ನೀಡಿಲ್ಲ. ಈಗಾಗಿ ಛಲವಾದಿ ಸಮುದಾಯದ ಏಕೈಕ ಶಾಸಕರಾಗಿರುವ ನೆಹರು ಓಲೇಕಾರ್‌ಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಅಲ್ಲದೆ ಇದೇ 15ರಂದು ಸಿಎಂ ಯಡಿಯೂರಪ್ಪ ಜಿಲ್ಲೆಯ ಕಂಚಾರಗಟ್ಟಿಗೆ ಬರುತ್ತಿದ್ದು, ಅಲ್ಲಿ ಅವರಿಗೆ ಮನವಿ ಸಲ್ಲಿಸುವುದಾಗಿ ಅಭಿಮಾನಿಗಳು ತಿಳಿಸಿದ್ದಾರೆ. ನೆಹರು ಓಲೇಕಾರ್ ಕಳೆದ 35 ವರ್ಷಗಳಿಂದ ರಾಜಕೀಯದಲ್ಲಿದ್ದು, ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡುವುದಾಗಿ ಅಭಿಮಾನಿಗಳು ತಿಳಿಸಿದ್ದಾರೆ.

ABOUT THE AUTHOR

...view details