ಕೋಮು ದ್ವೇಷದ ಪೋಸ್ಟರ್ ಅಂಟಿಸುತ್ತಿದ್ದ ಆರೋಪ: 12 ಮಂದಿ ಪಿಎಫ್ಐ ಕಾರ್ಯಕರ್ತರ ಬಂಧನ - ಕೋಮು ದ್ವೇಷ ಸೃಷ್ಟಿಸುವ ಬರಹಗಳ ಪೋಸ್ಟರ್ಗಳನ್ನು ಅಂಟಿಸುತ್ತಿದ್ದ 12 ಜನರ ಬಂಧನ
14:00 December 11
ಸಾರ್ವಜನಿಕ ಸ್ಥಳಗಳಲ್ಲಿ ಕೋಮು ದ್ವೇಷ ಬಿತ್ತುವ ಪೋಸ್ಟರ್ಗಳನ್ನು ಅಂಟಿಸುತ್ತಿದ್ದ ಆರೋಪದಡಿ 12 ಮಂದಿ ಪಿಎಫ್ಐ ಕಾರ್ಯಕರ್ತರನ್ನು ರಾಣೆಬೆನ್ನೂರು ತಾಲೂಕಿನ ಶಹರ್ ಪೊಲೀಸರು ಬಂಧಿಸಿ, ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ರಾಣೆಬೆನ್ನೂರು (ಹಾವೇರಿ):ಸಾರ್ವಜನಿಕ ಸ್ಥಳಗಳಲ್ಲಿ ಕೋಮು ದ್ವೇಷ ಸೃಷ್ಟಿಸುವ ಪೋಸ್ಟರ್ಗಳನ್ನು ಅಂಟಿಸುತ್ತಿದ್ದ ಆರೋಪದಡಿ 12 ಜನ ಪಿಎಫ್ಐ ಕಾರ್ಯಕರ್ತರನ್ನು ರಾಣೆಬೆನ್ನೂರು ತಾಲೂಕಿನ ಶಹರ್ ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ನಿನ್ನೆ ತಡರಾತ್ರಿ ಗೋಡೆಗಳ ಮೇಲೆ ಕೋಮುದ್ವೇಷ ಸೃಷ್ಟಿಸುವ ಪೋಸ್ಟರ್ ಅಂಟಿಸುತ್ತಿದ್ದರು ಎನ್ನಲಾಗ್ತಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಪೊಲೀಸರು ತಡೆಯಲು ಮುಂದಾಗಿದ್ದಾರೆ. ಈ ವೇಳೆ ಪಿಎಸ್ಐ ಪ್ರಭು ಕೆಳಗಿನಮನಿ ಹಾಗೂ ಇಬ್ಬರು ಪೊಲೀಸರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಬಳಿಕ ಪುಂಡರ ತಂಡ ಠಾಣೆಗೆ ನುಗ್ಗಿ ಪೊಲೀಸರಿಗೆ ಜೀವ ಬೆದರಿಕೆ ಹಾಕಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.