ಕರ್ನಾಟಕ

karnataka

ETV Bharat / state

ಹಾವೇರಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ - Haveri news

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಶಿಗ್ಗಾಂವಿ ಪೊಲೀಸರು ಮೂವತ್ತೊಂದು ಗ್ರಾಂ ತೂಕದ‌ ಗಾಂಜಾ ಪ್ಯಾಕೇಟ್​ಗಳು ಹಾಗೂ ಒಂದು ಬೈಕ್ ಜಪ್ತಿ ಮಾಡಿದ್ದಾರೆ.

Arrest of ganja seller in Haveri
ಗಾಂಜಾ

By

Published : Sep 10, 2020, 3:43 PM IST

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಠಾಣೆ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಕಿರಣ ಇಂಗಳಗಿ(24) ಎಂದು ಗುರುತಿಸಲಾಗಿದೆ. ಬಂಧಿತನಿಂದ ಐನೂರು ರೂ. ಮೌಲ್ಯದ ಮೂವತ್ತೊಂದು ಗ್ರಾಂ ತೂಕದ‌ ಗಾಂಜಾ ಪ್ಯಾಕೇಟ್​ಗಳು ಹಾಗೂ ಒಂದು ಬೈಕ್ ಜಪ್ತಿ ಮಾಡಿಕೊಳ್ಳಲಾಗಿದೆ.

ಬಂಧಿತ‌ ಆರೋಪಿ ಪಟ್ಟಣದ ಗಂಗಿಭಾವಿ ರಸ್ತೆಯಲ್ಲಿರುವ ಹಳೆ ಬಿಎಸ್ಎನ್ಎಲ್ ಕ್ವಾರ್ಟರ್ಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಶಿಗ್ಗಾಂವಿ ಠಾಣೆ ಪೊಲೀಸರು ಆರೋಪಿ ಕಿರಣನನ್ನು ಬಂಧಿಸಿ, ಜೈಲಿಗೆ ಕಳಿಸಿದ್ದಾರೆ. ಈ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details