ಹಾವೇರಿ: ತಾಲೂಕಿನ ಗುತ್ತಲ ಪಟ್ಟಣದ ಚಿದಂಬರ ನಗರದಲ್ಲಿ ಅಶುತೋಷ ನರುಕ (30) ಎಂಬುವವರು ನೇಣಿಗೆ ಶರಣಾಗಿದ್ದಾರೆ.
ರಾಜಸ್ಥಾನ ಮೂಲದ ಆಶುತೋಷ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಹಾವೇರಿ: ತಾಲೂಕಿನ ಗುತ್ತಲ ಪಟ್ಟಣದ ಚಿದಂಬರ ನಗರದಲ್ಲಿ ಅಶುತೋಷ ನರುಕ (30) ಎಂಬುವವರು ನೇಣಿಗೆ ಶರಣಾಗಿದ್ದಾರೆ.
ರಾಜಸ್ಥಾನ ಮೂಲದ ಆಶುತೋಷ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದ ಶಾಖೆಯಲ್ಲಿದ್ದ ಆಶುತೋಷ ಪಟ್ಟಣದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎಷ್ಟೇ ಹೊತ್ತಾದರೂ ಬಾಗಿಲು ತೆರೆಯದೇ ಇದ್ದಾಗ, ಸಂಶಯಗೊಂಡು ಸ್ಥಳೀಯರು ಕಿಟಕಿಯಲ್ಲಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗುತ್ತಲ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.