ಕರ್ನಾಟಕ

karnataka

ETV Bharat / state

ರಟ್ಟೀಹಳ್ಳಿಯಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತರ ಮೇಲೆ ಹಲ್ಲೆ.. - ಅನ್ಯಕೋಮಿನ ಯುವಕರಿಂದ ಹಲ್ಲೆ

ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ. ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ.

ಆರ್​ಎಸ್​ಎಸ್​ ಕಾರ್ಯಕರ್ತರ ಮೇಲೆ ಹಲ್ಲೆ
ಆರ್​ಎಸ್​ಎಸ್​ ಕಾರ್ಯಕರ್ತರ ಮೇಲೆ ಹಲ್ಲೆ

By

Published : Oct 12, 2022, 1:20 PM IST

Updated : Oct 12, 2022, 2:24 PM IST

ಹಾವೇರಿ: ಆರ್​ಎಸ್​ಎಸ್ ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಟ್ಟೀಹಳ್ಳಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಓರ್ವ ಆರ್​ಎಸ್​​ಎಸ್ ಕಾರ್ಯಕರ್ತನ ತಲೆಗೆ ಏಟು ಬಿದ್ದಿದೆ. ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಮಂಗಳವಾರ ರಾತ್ರಿ ಪಟ್ಟಣದಲ್ಲಿ ಘಟನೆ ನಡೆದಿದೆ.

ಆರ್​ಎಸ್​ಎಸ್​ ಕಾರ್ಯಕರ್ತರ ಮೇಲೆ ಹಲ್ಲೆ

ಪಟ್ಟಣದಲ್ಲಿ ಆರ್​​ಎಸ್​ಎಸ್ ಪಥಸಂಚಲನ ನಡೆಸುವ ಸಲುವಾಗಿ ಮಾರ್ಗ ವೀಕ್ಷಣೆಗೆ ತೆರಳಿದ್ದ ವೇಳೆ ಹಲ್ಲೆ ಮಾಡಲಾಗಿದೆ. ಪಟ್ಟಣದಲ್ಲಿ ನಡೆಯುತ್ತಿರುವ ಪ್ರಶಿಕ್ಷಣ ವರ್ಗಕ್ಕೆ ಬಂದಿದ್ದ ಆರ್​ಎಸ್​ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.

ಗಲಾಟೆಯ ವಿಡಿಯೋ ಇದೀಗ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಅನ್ಯಕೋಮಿನ 10 ಜನರನ್ನು ಬಂಧಿಸಿದ್ದೇವೆ ಎಂದು ಹಾವೇರಿ ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪಟ್ಟಣದಲ್ಲಿ ಪರಿಸ್ಥಿತಿ ಶಾಂತ ಸ್ಥಿತಿಯಲ್ಲಿ ಇದೆ. ರಟ್ಟೀಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:ಬಾಗಲಕೋಟೆಯಲ್ಲಿ ಆರ್​ಎಸ್​ಎಸ್​​ ಪಥಸಂಚಲನ : ಗಮನ ಸೆಳೆದ ಗಣವೇಷಧಾರಿಗಳು

Last Updated : Oct 12, 2022, 2:24 PM IST

ABOUT THE AUTHOR

...view details