ಕರ್ನಾಟಕ

karnataka

By

Published : Apr 28, 2019, 10:00 AM IST

ETV Bharat / state

ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ದಾಳಿ: 150 ಕೆ.ಜಿ ಪ್ಲಾಸ್ಟಿಕ್ ಬ್ಯಾಗ್ ವಶ

ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾರಾಟ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ನಗರಸಭೆ, ಪರಿಸರ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಿಷೇಧಿತ ಪ್ಲಾಸ್ಟಿಕ್  ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ದಾಳಿ

ಹಾವೇರಿ: ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ನಗರಸಭೆ, ಪರಿಸರ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಸುಮಾರು 150 ಕೆ.ಜಿ ಪ್ಲಾಸ್ಟಿಕ್ ಬ್ಯಾಗ್​ಗಳನ್ನು ವಶಪಡಿಸಿಕೊಂಡಿದ್ದಾರೆ.

ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ದಾಳಿ

ಎರಡು ಅಂಗಡಿಗಳಿಗೆ ತಲಾ ಎರಡು ಸಾವಿರ ರೂಪಾಯಿ ದಂಡ ಹಾಕಿದ್ದಾರೆ. ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾರಾಟ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಪರಿಸರ ಮತ್ತು ಆರೋಗ್ಯ ಇಲಾಖೆ ನಿಗಧಿಪಡಿಸಿರುವ ಮೈಕ್ರಾನ್‌ ಇರುವ ಪ್ಲಾಸ್ಟಿಕ್ ಮಾತ್ರ ಬಳಕೆ ಮಾಡಲು ಅವಕಾಶವಿದ್ದು, ಅದಕ್ಕೆ ಎಲ್ಲರೂ ಸಹಕರಿಸುವಂತೆ ಅಧಿಕಾರಿಗಳು ವರ್ತಕರಲ್ಲಿ ಮನವಿ ಮಾಡಿದ್ದಾರೆ.

For All Latest Updates

TAGGED:

ABOUT THE AUTHOR

...view details