ಹಾವೇರಿ: ಬಿಜೆಪಿ ಶಾಸಕಾಂಗ ಮತ್ತು ಬಿಜೆಪಿ ಹೈಕಮಾಂಡ್ ಬಸವರಾಜ ಬೊಮ್ಮಾಯಿಯವರನ್ನು ಸಿಎಂ ಮಾಡಿದೆಯೇ ಹೊರತು ಕಾಂಗ್ರೆಸ್‌ನವರು ಬಂದು ಮುಖ್ಯಮಂತ್ರಿ ಮಾಡಿಲ್ಲ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಮಾಡಲು ಅವರು ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಹಗರಣದಲ್ಲಿಯೂ ಭಾಗಿಯಾಗಿಲ್ಲ. ಕಾಂಗ್ರೆಸ್ ಪಕ್ಷದವರಿಗೆ ಮಾಡಲು ಕೆಲಸವಿಲ್ಲ ಎಂದರು. ರಾಜ್ಯದಲ್ಲಾದ ಮಳೆ ಹಾನಿ ಬಗ್ಗೆ ಕಾಂಗ್ರೆಸ್‌ನವರಿಗೆ ಕಾಳಜಿ ಇಲ್ಲ. ಹೀಗಾಗಿ, ಸಿಎಂ ಬದಲಾವಣೆ ವಿಚಾರ ಎತ್ತುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಪಾಟೀಲ್ ಹೇಳಿದರು.
ಸಿಎಂ ಬದಲಾವಣೆ ಮಾಡಲು ಅವರು ಯಾವುದೇ ತಪ್ಪು ಮಾಡಿಲ್ಲ: ಸಚಿವ ಬಿ ಸಿ ಪಾಟೀಲ್ - ಮೇಕೆದಾಟು ವಿಚಾರ
ಸಿಎಂ ಬದಲಾವಣೆ ಮಾಡಲು ಅವರು ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಹಗರಣದಲ್ಲಿಯೂ ಭಾಗಿಯಾಗಿಲ್ಲ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು.
ಕೃಷಿ ಸಚಿವ ಬಿ ಸಿ ಪಾಟೀಲ್