ಹಾವೇರಿ:ಸಮ್ಮಿಶ್ರ ಸರ್ಕಾರವು ಕೆಲವು ಜಿಲ್ಲೆಗಳಿಗೆ ಮಾತ್ರ ಮೀಸಲಾಗಿತ್ತು. ಇದರಿಂದ ಬೇಸತ್ತು ನಾವು ನಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದೇವೆ ಎಂದು ಅನರ್ಹ ಶಾಸಕ ಬಿ ಸಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ನಮ್ಗೂ ಡಿಸಿಎಂ ಲಕ್ಷ್ಮಣ ಸವದಿಗೂ ಸಂಬಂಧವಿಲ್ಲ.. ಕೌರವ ಬಿ ಸಿ ಪಾಟೀಲ್ ತಿರುಗೇಟು - DCM lakshman Savadi
ಸಮ್ಮಿಶ್ರ ಸರ್ಕಾರವು ಕೆಲವು ಜಿಲ್ಲೆಗಳಿಗೆ ಮಾತ್ರ ಮೀಸಲಾಗಿತ್ತು. ಇದರಿಂದ ಬೇಸತ್ತು ನಾವು ನಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದೇವೆ ಎಂದು ಅನರ್ಹ ಶಾಸಕ ಬಿ ಸಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ಮೈತ್ರಿ ಸರ್ಕಾರದಿಂದ ಬೇಸರವಾಗಿ ರಾಜೀನಾಮೆ ನೀಡಿದೆ: ಬಿ.ಸಿ ಪಾಟೀಲ್
ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ನಾವೆಲ್ಲರೂ ರಾಜೀನಾಮೆ ನೀಡಿದ್ದರಿಂದಾಗಿ ಬಿಜೆಪಿಗೆ ವರದಾನವಾಗಿ ಅವರು ಸರ್ಕಾರ ರಚನೆ ಮಾಡಿದ್ದಾರೆ. ಅಲ್ಲದೆ, ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ನಮ್ಮ ಪರ ತೀರ್ಪು ಬರುತ್ತದೆ ಎಂಬ ವಿಶ್ವಾಸವಿದೆ ಎಂದರು.ಇನ್ನು, ಇದೇ ವೇಳೆ ಡಿಸಿಎಂ ಲಕ್ಷ್ಮಣ ಸವದಿ ಬಗ್ಗೆ ಮಾತನಾಡಿ, ನಮಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ನಮ್ಮ ಬಗ್ಗೆ ಚಿಂತಿಸಲು ಅವರಿಗೆ ನಾವು ಹೇಳಿಲ್ಲ ಎಂದರು.
Last Updated : Oct 25, 2019, 11:00 PM IST