ಕರ್ನಾಟಕ

karnataka

ETV Bharat / state

ಪಂಚಮಸಾಲಿಗೆ ಮೀಸಲಾತಿ ನೀಡುವ ಬಗ್ಗೆ ನಿರ್ಣಯ ಕೊಡಿ: ಬಸವ ಜಯ ಮೃತ್ಯುಂಜಯ ಶ್ರೀ

ಜೂನ್​ 27ರ ಒಳಗಾಗಿ ಪಂಚಮಸಾಲಿಯವರಿಗೆ 2ಎ ಮೀಸಲಾತಿ ನೀಡುವ ಬಗ್ಗೆ ನಿರ್ಣಯ ಕೈಗೊಳ್ಳ ಬೇಕು ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ಬಸವ ಜಯ ಮೃತ್ಯುಂಜಯ ಶ್ರೀ ಹೇಳಿದ್ದಾರೆ.

basava jaya mruthyunjaya
ಪಂಚಮಸಾಲಿಗೆ ಮೀಸಲಾತಿ ನೀಡುವ ಬಗ್ಗೆ ನಿರ್ಣಯ ಕೊಡಿ

By

Published : Jun 8, 2022, 10:16 AM IST

ಹಾವೇರಿ:ಸಿಎಂ ಮನೆ ಮುಂದೆ ನಡೆಸಲಿರುವ ಪಂಚಮಸಾಲಿ ಮೀಸಲಾತಿ ಹೋರಾಟದ ಮುಖಂಡರಿಗೆ ಆಮೀಷ ಒಡ್ಡಿ ಸಿಎಂ ಮನೆ ಮುಂದೆ ಬೇಡ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಕೂಡಲಸಂಗಮ ಪಂಚಮಸಾಲಿಪೀಠದ ಶ್ರೀಗಳು ಆರೋಪಿಸಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಮಾತನಾಡಿದ ಅವರು, ಸಿಎಂ ಮನೆ ಮುಂದೆ ಪ್ರತಿಭಟನೆ ನಡೆಸುವುದನ್ನು ಬಿಟ್ಟು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನೆ ಮುಂದೆ ಪ್ರತಿಭಟನೆ ನಡೆಸಲು ಆಗುತ್ತಾ ಎಂದು ಪ್ರಶ್ನಿಸಿದರು. ಸಿಎಂ ಬಸವರಾಜ್ ಬೊಮ್ಮಾಯಿ ಈ ಕೂಡಲೇ ಗೃಹ ಕಚೇರಿ ಕೃಷ್ಣಾದಲ್ಲಿ ಆಡಳಿತಾತ್ಮಕ ಸಭೆ ಕರೆದು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುತ್ತಾರೋ ಇಲ್ಲವೂ. ನೀಡುವುದಾದರೆ ಯಾವ ದಿನಾಂಕ ಎಂದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಪಂಚಮಸಾಲಿಗೆ ಮೀಸಲಾತಿ ನೀಡುವ ಬಗ್ಗೆ ನಿರ್ಣಯ ಕೊಡಿ

ಇದೇ ತಿಂಗಳು 27 ರಂದು ಹಾವೇರಿ ಜಿಲ್ಲೆ ಶಿಗ್ಗಾವಿಯ ಸಿಎಂ ನಿವಾಸದ ಮುಂದೆ ಧರಣಿ ಸತ್ಯಾಗ್ರಹ ಮಾಡಲು ಈಗಾಗಲೇ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿಗೆ ಬಹಿರಂಗ ಪತ್ರ ಬರೆದಿರುವುದಾಗಿ ಕೂಡಲಸಂಗಮ ಪಂಚಮಸಾಲಿಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಮಾತನಾಡಿದ ಶ್ರೀಗಳು ಈ ಕುರಿತಂತೆ ಸರ್ಕಾರಕ್ಕೆ ಮುಜುಗರವಾಗಬಾರದು ಧರಣಿ ಸತ್ಯಾಗ್ರಹದಲ್ಲಿ ಏನೇ ಆದರೂ ಸರ್ಕಾರವೇ ಹೊಣೆ ಎಂದು ಸಿಎಂಗೆ ಪತ್ರ ಬರೆದಿರುವುದಾಗಿ ಶ್ರೀಗಳು ತಿಳಿಸಿದರು. ಆದಷ್ಟು ಬೇಗ ಮೀಸಲಾತಿ ಘೋಷಿಸಲಿ ಎನ್ನುವ ಉದ್ದೇಶಕ್ಕಾಗಿ ಸಿಎಂ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿರುವುದಾಗಿ ಹೇಳಿದ್ದಾರೆ.

ಪಂಚಮಸಾಲಿ ಮೀಸಲಾತಿ ಕುರಿತಂತೆ ತಮ್ಮ ಮನಸ್ಸಿನಲ್ಲಿ ಏನು ಇದೆ ಎಂಬುದವದನ್ನು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ಜೂನ್​ 27 ರಂದು ಧರಣಿ ಸತ್ಯಾಗ್ರಹಕ್ಕೂ ಮುನ್ನ ಶಿಗ್ಗಾವಿ ತಾಲೂಕಿನ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಧರಣಿ ಸತ್ಯಾಗ್ರಹಕ್ಕೆ ಬರುವಂತೆ ಭಕ್ತರಲ್ಲಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಇದನ್ನೂ ಓದಿ:ಮೈಸೂರಿನಲ್ಲಿ ಯೋಗ ದಿನಾಚರಣೆಗೆ ಮೋದಿ ಚಾಲನೆ: ಪೂರ್ವಸಿದ್ಧತೆ ಸಭೆ ನಡೆಸಿದ ಸಿಎಂ

ABOUT THE AUTHOR

...view details