ಹಾವೇರಿ: ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಹೆಸರು ಆಯ್ಕೆಯಾಗುತ್ತಿದ್ದಂತೆ ಹಾವೇರಿ ಜಿಲ್ಲೆಯಾದ್ಯಂತ ಸಂಭ್ರಮ ಮನೆಮಾಡಿದೆ.
ಹಾವೇರಿ: ಮುಗಿಲು ಮುಟ್ಟಿದ ಬಸವರಾಜ್ ಬೊಮ್ಮಾಯಿ ಅಭಿಮಾನಿಗಳ ಸಂಭ್ರಮ - Basavaraj Bommai fans celebration in haveri
ಹಾವೇರಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ ಬಸವರಾಜ್ ಬೊಮ್ಮಾಯಿಗೆ ಜಯಘೋಷ ಕೂಗುತ್ತಿದ್ದ ದೃಶ್ಯ ಕಂಡುಬಂದಿತು.
ಬೊಮ್ಮಾಯಿ ಅಭಿಮಾನಿಗಳ ಸಂಭ್ರಮ
ಬಸವರಾಜ್ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವ ಮತ್ತು ಸವಣೂರಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ಅಭಿಮಾನಿಗಳು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಬಿ.ಎಸ್.ಯಡಿಯೂರಪ್ಪಗೆ ಜೈಕಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಸವರಾಜ್ ಬೊಮ್ಮಾಯಿ ನಮ್ಮ ರಾಜಾಹುಲಿ ಎಂದು ಅಭಿಮಾನಿಗಳು ಕೇಕೆ ಹಾಕುತ್ತಿದ್ದ ದೃಶ್ಯ ಕಂಡುಬಂದಿತು.