ಹಾವೇರಿ:ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ತವರು ಜಿಲ್ಲೆಯಲ್ಲಿ ಸಂಭ್ರಮ ಮನೆಮಾಡಿದೆ.
ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ: ತವರು ಜಿಲ್ಲೆಯಲ್ಲಿ ಮನೆಮಾಡಿದ ಸಂಭ್ರಮ ಬಿಜೆಪಿ ಕಾರ್ಯಕರ್ತರು ಹಾಗೂ ಬೊಮ್ಮಾಯಿ ಅಭಿಮಾನಿಗಳು ಪಕ್ಷದ ಜಿಲ್ಲಾ ಕಚೇರಿ ಎದುರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಜೊತೆಗೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಪರ ಜಯಘೋಷ ಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಮುಳ್ಳೂರು, ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದರಿಂದ ಹಾವೇರಿ ಜಿಲ್ಲೆ ಸಮಗ್ರವಾಗಿ ಅಭಿವೃದ್ಧಿಯಾಗಲಿದೆ. ಇದು ಹಾವೇರಿ ಜಿಲ್ಲೆಯ ಬಿಜೆಪಿ ನಾಯಕರಿಗಷ್ಟೇ ಅಲ್ಲ, ಪ್ರತಿಯೊಬ್ಬ ನಾಗರಿಕನಿಗೂ ಸಂಭ್ರಮ ತಂದಿದೆ ಎಂದು ಅಭಿಪ್ರಾಯಪಟ್ಟರು.
ಶಿಗ್ಗಾಂವಿಯಲ್ಲೂ ಸಂಭ್ರಮಾಚರಣೆ
ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ: ತವರು ಜಿಲ್ಲೆಯಲ್ಲಿ ಮನೆಮಾಡಿದ ಸಂಭ್ರಮ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಬೊಮ್ಮಾಯಿ ಕ್ಷೇತ್ರ ಶಿಗ್ಗಾಂವಿಯಲ್ಲೂ ಸಂಭ್ರಮಿಸಲಾಯಿತು. ಮನೆಯ ಕೆಲಸಗಾರರು ಬೊಮ್ಮಾಯಿ ಭಾವಚಿತ್ರ ಹಿಡಿದು ಜೈಕಾರ ಹಾಕಿದರು. ಜೊತೆಗೆ ಅವರೊಂದಿಗಿನ ಒಡನಾಟವನ್ನ ನೆನಪಿಸಿಕೊಂಡರು. ಶಿಗ್ಗಾಂವಿ ಪಟ್ಟಣದಲ್ಲೂ ಸಹ ಸಂಭ್ರಮ ಮನೆಮಾಡಿತ್ತು. ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಸವಣೂರು ವೃತ್ತದಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ಇದನ್ನೂ ಓದಿ:ಸಚಿವ ಸ್ಥಾನಕ್ಕಾಗಿ ಯಾರ ಬಾಗಿಲಿಗೂ ಹೋಗುವ ವ್ಯಕ್ತಿಯಲ್ಲ: ಹೆಚ್ ವಿಶ್ವನಾಥ್