ಹಾವೇರಿ: ಮಾಜಿ ಸಚಿವ ಜಮೀರ್ ಅಹ್ಮದ್ ನಡೆ ಅವರು ಯಾರ ಕಡೆ ಇದ್ದಾರೆ ಎಂಬುದನ್ನು ತಿಳಿಸುತ್ತೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗಲಭೆ ಕುರಿತಂತೆ ತನಿಖೆ ಆರಂಭವಾಗಿದೆ ಎಂದು ತಿಳಿಸಿದರು.
ಬಿಬಿಎಂಪಿ ಸದಸ್ಯನಿಗೆ ಕಾನೂನಿನ ಪ್ರಕಾರ ನೊಟೀಸ್ ನೀಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇವೆಲ್ಲಾ ನಿರಾಧಾರ. ಡಿಕೆಶಿಗೆ ಈ ನೆಲದ ಕಾನೂನು ಗೊತ್ತಿದೆ ಎಂದು ಭಾವಿಸಿದ್ದೇನೆ ಎಂದು ಬೊಮ್ಮಾಯಿ ತಿಳಿಸಿದರು.
ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ಇತ್ತಿಚೀನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬರುವ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರ ಸಭೆ ಕರೆಯಲಾಗುವುದು. ಸಭೆಯಲ್ಲಿ ಈ ರೀತಿಯ ಪೋಸ್ಟ್‌ಗಳಿಗೆ ಫಿಲ್ಟರ್ ಹಾಕುವ ಕುರಿತಂತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಶಾಸಕ ಅಖಂಡ ಶ್ರೀನಿವಸ್ಗೆ ನಾವು ಯಾವುದೇ ರೀತಿಯ ಬ್ಲಾಕ್ಮೇಲ್ ಮಾಡಿಲ್ಲ ಎಂದರು. ಮಂಗಳೂರಿನಲ್ಲಿ ವಿಹೆಚ್‌ಪಿ ನಾಯಕರಿಗೆ ಭರವಸೆ ನೀಡಿರುವ ಕುರಿತಂತೆ ಮಾತನಾಡಿದ ಅವರು, ಕಾನೂನು ಬದ್ಧವಾಗಿರುವ ಪ್ರಕರಣಗಳಲ್ಲಿ ಕೇಸ್ ಹಿಂಪಡೆಯಲಾಗುವುದು ಎಂದು ತಿಳಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.