ಹಾವೇರಿ: ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಬಸವ ಜಯಂತಿ ಆಚರಿಸಲಾಯಿತು. ಜಿಲ್ಲೆಯ ವಿವಿಧಡೆ ಬಸವ ಜಯಂತಿ ನಿಮಿತ್ತ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಮತ್ತು ಸಾಮೂಹಿಕ ವಿವಾಹಗಳು ಆಯೋಜಿಸಲಾಗಿತ್ತು. ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ನಗರದ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು.
ಹುಕ್ಕೇರಿಮಠದಲ್ಲಿ ನಡೆದ ಕಾರ್ಯಕ್ರಮಕ್ಕೆ ಸದಾಶಿವಶ್ರೀಗಳು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸುಮಾರು 16 ಜೋಡಿಗಳು ಸಾಮೂಹಿಕ ವಿವಾಹದಲ್ಲಿ ನವಜೀವನಕ್ಕೆ ಕಾಲಿಟ್ಟರು. ನೂತನ ದಂಪತಿಗಳಿಗೆ ಆಶೀರ್ವಾದ ಮಾಡಿದ ಸದಾಶಿವಶ್ರೀಗಳು ಬಸವೇಶ್ವರರ ಕಾಯಕ ಮತ್ತು ದಾಸೋಹ ಪರಂಪರೆ ಪಾಲನೆ ಮಾಡುವಂತೆ ನವಜೋಡಿಗಳಿಗೆ ತಿಳಿಸಿದರು.