ಕರ್ನಾಟಕ

karnataka

ETV Bharat / state

ರಾಜ್ಯಸಭೆ ಟಿಕೆಟ್ ಹಂಚಿಕೆ ಬಗ್ಗೆ ವರಿಷ್ಠರ ನಿರ್ಧಾರ ಸ್ವಾಗತಾರ್ಹ: ಸಚಿವ ಬಿ.ಸಿ.ಪಾಟೀಲ್ - Minister B.C. Patil Appeal

ಧಾರವಾಡ, ಬೆಳಗಾವಿ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಯಾಬಿನ್ ಬೀಜ ಬಿತ್ತನೆ ಮಾಡಿ ರೈತರು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ ರೈತರು ಸೋಯಾಬಿನ್ ಬಿಟ್ಟು ಪರ್ಯಾಯವಾಗಿ ಬೇರೆ ಬೆಳೆ ಬೆಳೆಯುವಂತೆ ಸಚಿವ ಬಿ.ಸಿ.ಪಾಟೀಲ್​ ಮನವಿ ಮಾಡಿದ್ದಾರೆ.

Minister B.C. Patil
ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಬಿ.ಸಿ.ಪಾಟೀಲ್ ಸಭೆ

By

Published : Jun 8, 2020, 11:44 PM IST

ಹಾವೇರಿ: ರಾಜ್ಯಸಭೆಯ ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷದ ವರಿಷ್ಠರ ನಿರ್ಧಾರ ಸ್ವಾಗತಾರ್ಹ. ವರಿಷ್ಠರು ಪಕ್ಷದ ಕಾರ್ಯಕರ್ತರನ್ನ ಗುರುತಿಸಿ ಟಿಕೆಟ್ ನೀಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್​ ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಸೋಯಾಬಿನ್ ಬಿತ್ತನೆ ಬೀಜದಲ್ಲಿ ಮೊಳಕೆಯ ಪ್ರಮಾಣ ಕಡಿಮೆ ಇದೆ. ಧಾರವಾಡ, ಬೆಳಗಾವಿ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಯಾಬಿನ್ ಬೀಜ ಬಿತ್ತನೆ ಮಾಡಿ ರೈತರು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ ರೈತರು ಸೋಯಾಬಿನ್ ಬಿಟ್ಟು ಪರ್ಯಾಯವಾಗಿ ಬೇರೆ ಬೆಳೆ ಬೆಳೆಯುವಂತೆ ಮನವಿ ಮಾಡಿದ್ದಾರೆ.

ಅಲ್ಲದೇ ಸೋಯಾಬಿನ್ ಬಿತ್ತನೆ ಮಾಡಿ ತೊಂದರೆಗೆ ಒಳಗಾಗಿರುವ ರೈತರಿಗೆ ಬಿತ್ತನೆ ಬೀಜ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ABOUT THE AUTHOR

...view details